ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಏಪ್ರಿಲ್ ತಿಂಗಳಿನಲ್ಲಿ ನಡೆಸುವ ಜೆಇಇ ಮುಖ್ಯ ಪರೀಕ್ಷೆ 2021ರ ಪ್ರವೇಶ ಪತ್ರವನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡಲಿದೆ. ಪ್ರವೇಶ ಪತ್ರ ಪ್ರಕಟ ಮಾಡಿದ ಬಳಿಕ ಜೆಇಇ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಭಾರತದೆಲ್ಲೆಡೆ ಜೆಇಇ ಪ್ರಮುಖ 2021 ಏಪ್ರಿಲ್ ಸೆಷನ್ ಪರೀಕ್ಷೆಯು ಏಪ್ರಿಲ್ 27 ರಿಂದ 30,2021ರ ವರೆಗೆ ನಡೆಯಲಿದೆ. ಅಭ್ಯರ್ಥಿಗಳು ಪರೀಕ್ಷೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.
ಜೆಇಇ ಪರೀಕ್ಷೆ:
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಪರೀಕ್ಷೆಯು ವೃತ್ತಿಪರ ಕೋರ್ಸುಗಳಿಗೆ ಸೇರುವ ವಿದ್ಯಾರ್ಥಿಗಳಲ್ಲಿ ಒತ್ತಡ ಕಡಿಮೆಮಾಡಲು ಹಾಗು ತಾಂತ್ರಿಕ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಾಧನೆ ಮಾಡಲು ಬಯಸುವವರಿಗೆ ಈ ಪರೀಕ್ಷೆಗಳು ಸಹಕಾರಿಯಾಗಿವೆ. ಜೆ.ಇ.ಇ. ಪರೀಕ್ಷೆಗಳು ರಾಷ್ಟ್ರ ಮಟ್ಟದ ತಾಂತ್ರಿಕ ವಿದ್ಯಾಸಂಸ್ಥೆಗಳಿಗೆ ಪ್ರವೇಶವನ್ನು ಪಡೆಯಲು ತೆಗೆದುಕೊಳ್ಳಬೇಕಾದಂಥವು. ಐ.ಐ.ಟಿ., ಎನ್.ಐ.ಟಿ., ಐ.ಎಸ್.ಇ.ಆರ್., ಮುಂತಾದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಶುದ್ಧ ವಿಜ್ಞಾನವನ್ನೋ ಅಥವಾ ಅನ್ವಯ ವಿಜ್ಞಾನವನ್ನೋ ಅಧ್ಯಯನ ಮಾಡಲು ಜೆ.ಇ.ಇ. ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆಯಬೇಕು. ಜೆ.ಇ.ಇ. ಆಯ್ಕೆ ಪರೀಕ್ಷೆಗಳು ತಮ್ಮದೇ ಆದ ಪಠ್ಯವನ್ನು ಆಧರಿಸಿರುತ್ತವೆ.
ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ:
ಸ್ಟೆಪ್ 1: ಜೆಇಇ ಅಧಿಕೃತ ವೆಬ್-ಸೈಟ್ https://jeemain.nta.nic.in/WebInfo/Public/View.aspx?page=1 ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Download Admit Card of JEE (Main)- April 2021" ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಅರ್ಜಿ ಸಂಖ್ಯೆ, ಜನ್ಮ ದಿನಾಂಕ, ಸೆಕ್ಯುರಿಟಿ ಪಿನ್ ಅನ್ನು ಸಂಪೂರ್ಣವಾಗಿ ತಪ್ಪಿಲ್ಲದಂತೆ ಭರ್ತಿ ಮಾಡಿ
ಸ್ಟೆಪ್ 4: ನಂತರ "SUBMIT" ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.