ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಜಾಯಿಂಟ್ ಎಂಟ್ರೆನ್ಸ್ ಎಕ್ಸಾಮಿನೇಶನ್ (ಜೆಇಇ) ಮೇನ್ಸ್ ಪತ್ರಿಕೆ -2ರ ಫಲಿತಾಂಶವನ್ನು ಇಂದು ಘೋಷಿಸಿದೆ. ಪತ್ರಿಕೆಗೆ ಸಂಬಂಧಿಸಿದ ಉತ್ತರಗಳನ್ನು ಕೂಡ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.ಜೆಇಇ ಪರೀಕ್ಷಾ ಫಲಿತಾಂಶವನ್ನು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

ದೇಶದಾದ್ಯಂತ ಒಟ್ಟು 370 ಕೇಂದ್ರಗಳಲ್ಲಿ ಈ ಪರೀಕ್ಷೆಯನ್ನು ನಡೆಸಲಾಗಿತ್ತು. 2019ರ ಜೆಇಇ ಮೇನ್ ಜನವರಿಯಲ್ಲಿ ನಡೆದ ಪರೀಕ್ಷೆಗೆ ಒಟ್ಟು 1,80,052 ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿದ್ದರು ಅದರಲ್ಲಿ ಪರೀಕ್ಷೆಗೆ 1,45,386 ವಿದ್ಯಾರ್ಥಿಗಳು ಹಾಜರಾಗಿದ್ದರು. ಏಪ್ರಿಲ್ ನಲ್ಲಿ ಪರೀಕ್ಷೆಗೆ ಒಟ್ಟು 1,69,759 ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿದ್ದರು. ಅದರಲ್ಲಿ 1,44,032ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.ಮೇನ್ ಪತ್ರಿಕೆ-2ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಮೇ 27ರಂದು ನಡೆಯುವ ಐಐಟಿ-ಜೆಇಇ ಅಡ್ವಾನ್ಸಡ್ ಪರೀಕ್ಷೆಗೆ ಅರ್ಹತೆ ಗಳಿಸಿದ್ದಾರೆ.
ಬಿ.ಆರ್ಕ್ ಹಾಗೂ ಬಿ. ಪ್ಲಾನಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜೆಇಇ ಮುಖ್ಯ ಪರೀಕ್ಷೆಯನ್ನು ಆಯೋಜಿಸುತ್ತದೆ. ಇನ್ನು, ಈ ವರ್ಷ ಜೆಇಇ ಮುಖ್ಯ ಪರೀಕ್ಷೆ ಜನವರಿಯಲ್ಲಿ ಮೊದಲ ಪ್ರಯತ್ನ ಹಾಗೂ ಏಪ್ರಿಲ್‌ನಲ್ಲಿ ಎರಡನೇ ಪ್ರಯತ್ನ - ಅಂದರೆ ವರ್ಷಕ್ಕೆ ಎರಡು ಬಾರಿ ನಡೆದಿದೆ. ಇದೇ ಮೊದಲ ಬಾರಿಗೆ ಜೆಇಇ ಮುಖ್ಯ ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ಆಯೋಜಿಸಲಾಗಿತ್ತು.
ಜೆಇಇ ಪರೀಕ್ಷಾ 2019 ರ ಪೇಪರ್ II ರ ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ವಿದ್ಯಾರ್ಥಿಗಳು ಜೆಇಇ ಅಧಿಕೃತ ವೆಬ್‌ಸೈಟ್ https://jeemain.nic.in/webinfo/Public/Home.aspx ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಕಾಣಿಸುವ "JEE (Main) April 1 and Paper 2 April 2019 NTA Score" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಪುಟ ತೆರೆಯುತ್ತದೆ ಅಲ್ಲಿ ಕೇಳಲಾಗಿರುವ ನಿಮ್ಮ ಅಪ್ಲಿಕೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ
ಸ್ಟೆಪ್ 4: ನಂತರ ನಿಮ್ಮ ಫಲಿತಾಂಶವನ್ನು ವೀಕ್ಷಿಸಿ , ಡೌನ್‌ಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ
ಜೆಇಇ ಫಲಿತಾಂಶದ ಕುರಿತು ಹಾಗೂ ಸ್ಟೇಟ್ ವೈಸ್ ಟಾಪರ್ಸ್‌ಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











