JEE Mains 2022 Admit Card : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಜೆಇಇ ಪರೀಕ್ಷೆ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಪರೀಕ್ಷೆಯು ವೃತ್ತಿಪರ ಕೋರ್ಸುಗಳಿಗೆ ಸೇರುವ ವಿದ್ಯಾರ್ಥಿಗಳಲ್ಲಿ ಒತ್ತಡ ಕಡಿಮೆಮಾಡಲು ಹಾಗು ತಾಂತ್ರಿಕ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಾಧನೆ ಮಾಡಲು ಬಯಸುವವರಿಗೆ ಈ ಪರೀಕ್ಷೆಗಳು ಸಹಕಾರಿಯಾಗಿವೆ.

ಜೆಇಇ ಮುಖ್ಯ ಪರೀಕ್ಷೆಯ  ಪ್ರವೇಶ ಪತ್ರ ಇಂದು ಪ್ರಕಟ ಸಾಧ್ಯತೆ

ಜೆ.ಇ.ಇ. ಪರೀಕ್ಷೆಗಳು ರಾಷ್ಟ್ರ ಮಟ್ಟದ ತಾಂತ್ರಿಕ ವಿದ್ಯಾಸಂಸ್ಥೆಗಳಿಗೆ ಪ್ರವೇಶವನ್ನು ಪಡೆಯಲು ತೆಗೆದುಕೊಳ್ಳಬೇಕಿರುತ್ತದೆ. ಐ.ಐ.ಟಿ., ಎನ್.ಐ.ಟಿ., ಐ.ಎಸ್.ಇ.ಆರ್ ಮುಂತಾದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಶುದ್ಧ ವಿಜ್ಞಾನವನ್ನೋ ಅಥವಾ ಅನ್ವಯ ವಿಜ್ಞಾನವನ್ನೋ ಅಧ್ಯಯನ ಮಾಡಲು ಜೆ.ಇ.ಇ. ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆಯಬೇಕಿರುತು್ತದೆ. ಜೆ.ಇ.ಇ. ಆಯ್ಕೆ ಪರೀಕ್ಷೆಗಳು ತಮ್ಮದೇ ಆದ ಪಠ್ಯವನ್ನು ಆಧರಿಸಿರುತ್ತವೆ. ಪರೀಕ್ಷೆಯ ಪ್ರವೇಶ ಪತ್ರ ಇಂದು ಪ್ರಕಟವಾಗುವ ಸಾಧ್ಯತೆ ಇದ್ದು, ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.

ಜೆಇಇ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಲಭ್ಯವಿರುವ ವೆಬ್‌ಸೈಟ್‌ಗಳು :

jeemain.nta.nic.in 2022
www.jeemain.nta.nic.in
nta.ac.in

ಜೆಇಇ ಮುಖ್ಯ ಪರೀಕ್ಷೆಯ  ಪ್ರವೇಶ ಪತ್ರ ಇಂದು ಪ್ರಕಟ ಸಾಧ್ಯತೆ

JEE ಮುಖ್ಯ 2022 ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

JEE ಮುಖ್ಯ ಪರೀಕ್ಷೆ 2022ರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ jeemain.nta.nic.in ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಸೆಷನ್ 1ರ ಪ್ರವೇಶ ಪತ್ರದ ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಪಾಸ್‌ವರ್ಡ್ ನಮೂದಿಸಿ
ಸ್ಟೆಪ್ 4: ಪರೀಕ್ಷೆಯ ಪ್ರವೇಶ ಪತ್ರ ಪರದೆಯ ಮೇಲೆ ಮೂಡುತ್ತದೆ
ಸ್ಟೆಪ್ 5: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ, ನಂತರ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ JEE ಮುಖ್ಯ 2022ರ ನಗರ ಮಾಹಿತಿಯನ್ನು ಜೂನ್ 14 ರಂದು jeemain.nta.nic.in 2022 ರಲ್ಲಿ ಬಿಡುಗಡೆ ಮಾಡಿದೆ. ಅರ್ಜಿದಾರರು ತಮ್ಮ JEE ಮುಖ್ಯ 2022 ನಗರ ಮಾಹಿತಿಯನ್ನು ಅಪ್ಲಿಕೇಶನ್ ಸಂಖ್ಯೆ ಮತ್ತು ಪಾಸ್‌ವರ್ಡ್ ಮೂಲಕ ಪರಿಶೀಲಿಸಬಹುದು. ಜೆಇಇ ಮೇನ್ 2022 ರ ಸಿಟಿ ಇಂಟಿಮೇಶನ್ ಸ್ಲಿಪ್ ಪರೀಕ್ಷೆಯ ದಿನಾಂಕ ಮತ್ತು ಪರೀಕ್ಷಾ ನಗರವನ್ನು ಉಲ್ಲೇಖಿಸುತ್ತದೆ. ಪರೀಕ್ಷಾ ಪ್ರಾಧಿಕಾರವು ಜೆಇಇ ಮೇನ್ಸ್ 2022 ಪರೀಕ್ಷೆಯನ್ನು ಎರಡು ಅವಧಿಗಳಲ್ಲಿ ನಡೆಸುತ್ತದೆ. ಜೆಇಇ ಮೇನ್ 2022 ಸೆಷನ್ 1 ಪರೀಕ್ಷೆಯನ್ನು ಜೂನ್ 23 ರಿಂದ 29 ರವರೆಗೆ ನಡೆಸಲಾಗುವುದು ಮತ್ತು ಸೆಷನ್ 2 ಪರೀಕ್ಷೆಯನ್ನು ಜುಲೈ 21 ರಿಂದ 30 ರವರೆಗೆ ನಡೆಸಲಾಗುವುದು.

For Quick Alerts
ALLOW NOTIFICATIONS  
For Daily Alerts

English summary
JEE Main examination 2022 admit card to be release today. Here is how to download it.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X