2020ರ ಜೆಇಇ ಮತ್ತು ನೀಟ್ ಪರೀಕ್ಷೆಗಳ ಹೊಸ ವೇಳಾಪಟ್ಟಿ ರಿಲೀಸ್

ಜಂಟಿ ಪ್ರವೇಶ ಪರೀಕ್ಷೆ (JEE Main), ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಪ್ರಕಟಿಸಿದೆ.

ನೀಟ್ ಮತ್ತು ಜೆಇಇ ಪರೀಕ್ಷೆಗಳ ಹೊಸ ವೇಳಾಪಟ್ಟಿ ಪ್ರಕಟ

ಹೊಸ ವೇಳಾಪಟ್ಟಿಯ ಪ್ರಕಾರ ಜೆಇಇ ಮುಖ್ಯ ಪರೀಕ್ಷೆಯನ್ನು ಜುಲೈ 18,2020 ರಿಂದ ಜುಲೈ 23,2020 ರವರೆಗೆ ನಡೆಸಲಾಗುತ್ತದೆ. ನೀಟ್ 2020ರ ಪರೀಕ್ಷೆಯನ್ನು ಜುಲೈ 26 ರಂದು ನಡೆಸಲಾಗುತ್ತದೆ.

ದೇಶದಾದ್ಯಂತದ ಅಂಗೀಕೃತ ಮೆಡಿಕಲ್ ಕಾಲೇಜುಗಳು ಮತ್ತು ಡೆಂಟಲ್ ಕಾಲೇಜುಗಳು ಹಾಗೂ ಇತರೆ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಾತಿಗಾಗಿ, ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯನ್ನು (NEET) ನಡೆಸಲಾಗುತ್ತದೆ. ದೇಶದಾದ್ಯಂತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿಗಾಗಿ ಜೆಇಇ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ.

ಮೇ 5 ರಂದು ಡಾಕ್ಟರ್ ಮತ್ತು ಇಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳಿಗೆ ವೇಳಾಪಟ್ಟಿಯನ್ನು ಹೆಚ್ಆರ್ಡಿ ಮಿನಿಸ್ಟರ್ ರಮೇಶ್ ಪೋಖ್ರಿಯಾಲ್ ಪ್ರಕಟಿಸಿದ್ದಾರೆ. 15 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ದೇಶದಾದ್ಯಂತ ಈ ವರ್ಷ ನೀಟ್ ಪರೀಕ್ಷೆಗೆ ರಿಜಿಸ್ಟ್ರೇಷನ್ ಪಡೆದಿದ್ದಾರೆ. 9 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಜೆಇಇ ಮುಖ್ಯ ಪರೀಕ್ಷೆಗೆ ರಿಜಿಸ್ಟರ್ ಮಾಡಿಕೊಂಡಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Nta released Jee mains and neet exam 2020 new time table.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X