NEET JEE Exams 2020: ಜೆಇಇ ಮತ್ತು ನೀಟ್ ಪರೀಕ್ಷೆ ಮುಂದೂಡಿಕೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ನಡುವೆಯೂ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ 6 ರಾಜ್ಯಗಳು ಸಲ್ಲಿಸಿದ್ದ ಅರ್ಜಿ ಮರುಪರಿಶೀಲನೆಯನ್ನು ಸುಪ್ರೀಂ ಇಂದು ವಜಾಗೊಳಿಸಿದೆ.

 

ಜೆಇಇ ಮತ್ತು ನೀಟ್ ಪರೀಕ್ಷೆ ಮುಂದೂಡಲು 6 ರಾಜ್ಯಗಳು ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಈ ಮುಂಚೆ ಬಹುತೇಕ ರಾಜ್ಯಗಳು ಸೆಪ್ಟೆಂಬರ್‌ ತಿಂಗಳಲ್ಲಿ ಆಯೋಜಿಸಿರುವ ಪರೀಕ್ಷೆಯನ್ನು ಮುಂದೂಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದವು. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಒಪ್ಪದ ಕಾರಣ ಸುಪ್ರೀಂ ಕೋರ್ಟ್‌‌ಗೂ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಈ ಮೊದಲು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಪರೀಕ್ಷೆಯನ್ನು ನಡೆಸಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿತ್ತು. ಆದರೆ, ಈಗ ಈ ಆದೇಶವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ರಾಜ್ಯಗಳು ಮತ್ತೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ತಿರಸ್ಕರಿಸಿದೆ.

ಈಗಾಗಲೇ ಜೆಇಇ ಪರೀಕ್ಷೆ ಆರಂಭಗೊಂಡಿದ್ದು, ಸೆ.1ರಂದು ನಡೆದ ಪರೀಕ್ಷೆಗೆ ಶೇ.50ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದರು. ಹಾರ, ಅಸ್ಸಾಂ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೊರೊನಾ ವೈರಸ್ ಮತ್ತು ಪ್ರವಾಹಕ್ಕೆ ಒಳಗಾಗಿರುವುದರಿಂದ, ಆ ರಾಜ್ಯಗಳ ವಿದ್ಯಾರ್ಥಿಗಳು ಮತ್ತಷ್ಟು ತೊಂದರೆಯಲ್ಲಿ ಸಿಲುಕಿದ್ದಾರೆ. ಹೀಗಾಗಿ ಪರೀಕ್ಷೆಗೆ ಆಗಮಿಸಲು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ. ಇದಲ್ಲದೆ, ಎಲ್ಲೆಡೆ ಸರ್ಮಪಕ ಸಾರಿಗೆ ವ್ಯವಸ್ಥೆಯನ್ನು ಇನ್ನೂ ಆರಂಭಿಸದ ಕಾರಣ ದೇಶದ ಹಲವಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಸಾಧ್ಯವಾಗಿಲ್ಲ ಎಂದು ಹಲವು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ. ಈ ಭಾರಿ ದೇಶಾದ್ಯಂತ ಸುಮಾರು ಶೇ.50ರಷ್ಟು ವಿದ್ಯಾರ್ಥಿಗಳು ಜೆಇಇ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ಈಗಾಗಲೇ ವರದಿಗಳು ಹೊರ ಬೀಳುತ್ತಿವೆ. ಅಲ್ಲದೆ, ಇದನ್ನು ವಿರೋಧಿಸಿ ಹಲವಾರು ವಿದ್ಯಾರ್ಥಿ ಸಂಘಟನೆಗಳೂ ಪ್ರತಿಭಟನೆಗೆ ಮುಂದಾಗಿವೆ.

ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆಯ ದಿನಾಂಕ ನಿಗದಿಯಾಗಿದ್ದು, ಪರೀಕ್ಷೆಗೆ 15.97 ಲಕ್ಷ ವೈದ್ಯಕೀಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿರುತ್ತಾರೆ ಹಾಗಾಗಿ ನೀಟ್ ಪರೀಕ್ಷೆಯನ್ನು ಮುಂದೂಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದರು. ಹೀಗಾಗಿ ರಾಜ್ಯ ಸರ್ಕಾರಗಳು ಅನುಮತಿ ಮರುಪರಿಶೀಲನೆಗೆ ಒತ್ತಾಯಿಸಿ ಸಲ್ಲಿಸಿರುವ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್‌ ವಿಚಾರಣೆಗೆ ತೆಗೆದುಕೊಂಡಿತು.

 

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಪರೀಕ್ಷೆಗಳು ನಡೆಯಬೇಕಿವೆ ಹಾಗಾಗಿ ಈಗಾಗಲೇ ನಿಗದಿಯಾಗಿರುವ ದಿನಾಂಕಗಳಲ್ಲಿ ಪರೀಕ್ಷೆಗಳು ನಡೆಯಲಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

For Quick Alerts
ALLOW NOTIFICATIONS  
For Daily Alerts

English summary
Supreme court rejects review of petition by 6 states to postpone jee and neet exams.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X