NEET JEE Exams 2020: ಜೆಇಇ ಮತ್ತು ನೀಟ್ ಪರೀಕ್ಷೆ ಮುಂದೂಡುವ ಬಗ್ಗೆ ಇಂದು ವಿಚಾರಣೆ ನಡೆಸಲಿರುವ ಸುಪ್ರೀಂ

ಕೊರೋನಾ ಸೋಂಕು ದೇಶದೆಲ್ಲೆಡೆ ಹಬ್ಬುತ್ತಿರುವ ನಡುವೆಯೂ ಜೆಇಇ ಪರೀಕ್ಷೆ ಮತ್ತು ಸೆ.13ರಂದು ನಡೆಯಬೇಕಿರುವ ನೀಟ್ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ 6 ರಾಜ್ಯಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಇಂದು ತೆಗೆದುಕೊಳ್ಳಲಿದೆ.

ಜೆಇಇ ಮತ್ತು ನೀಟ್ ಪರೀಕ್ಷೆ ಮುಂದೂಡುವ ಬಗ್ಗೆ ಇಂದು ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ಈ ಮುಂಚೆ ಬಹುತೇಕ ರಾಜ್ಯಗಳು ಸೆಪ್ಟೆಂಬರ್‌ ತಿಂಗಳಲ್ಲಿ ಆಯೋಜಿಸಿರುವ ಪರೀಕ್ಷೆಯನ್ನು ಮುಂದೂಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದವು. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಒಪ್ಪದ ಕಾರಣ ಸುಪ್ರೀಂ ಕೋರ್ಟ್‌‌ಗೂ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಈ ಮೊದಲು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಪರೀಕ್ಷೆಯನ್ನು ನಡೆಸಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿತ್ತು. ಆದರೆ, ಈಗ ಈ ಆದೇಶವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ರಾಜ್ಯಗಳು ಮತ್ತೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆ ನಡೆಸಲಿದೆ.

ಈಗಾಗಲೇ ಜೆಇಇ ಪರೀಕ್ಷೆ ಆರಂಭಗೊಂಡಿದ್ದು, ಸೆ.1ರಂದು ನಡೆದ ಪರೀಕ್ಷೆಗೆ ಶೇ.50ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದರು. ಅಸ್ಸಾಂ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೊರೊನಾ ವೈರಸ್ ಮತ್ತು ಪ್ರವಾಹಕ್ಕೆ ಒಳಗಾಗಿರುವುದರಿಂದ, ಆ ರಾಜ್ಯಗಳ ವಿದ್ಯಾರ್ಥಿಗಳು ಮತ್ತಷ್ಟು ತೊಂದರೆಯಲ್ಲಿ ಸಿಲುಕಿದ್ದಾರೆ. ಹೀಗಾಗಿ ಪರೀಕ್ಷೆಗೆ ಆಗಮಿಸಲು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ. ಇದಲ್ಲದೆ, ಎಲ್ಲೆಡೆ ಸರ್ಮಪಕ ಸಾರಿಗೆ ವ್ಯವಸ್ಥೆಯನ್ನು ಇನ್ನೂ ಆರಂಭಿಸದ ಕಾರಣ ದೇಶದ ಹಲವಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಸಾಧ್ಯವಾಗಿಲ್ಲ ಎಂದು ಹಲವು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ಈ ಭಾರಿ ದೇಶಾದ್ಯಂತ ಸುಮಾರು ಶೇ.50ರಷ್ಟು ವಿದ್ಯಾರ್ಥಿಗಳು ಜೆಇಇ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ ಎಂದು ಈಗಾಗಲೇ ವರದಿಗಳು ಹೊರ ಬೀಳುತ್ತಿವೆ. ಅಲ್ಲದೆ, ಇದನ್ನು ವಿರೋಧಿಸಿ ಹಲವಾರು ವಿದ್ಯಾರ್ಥಿ ಸಂಘಟನೆಗಳೂ ಪ್ರತಿಭಟನೆಗೆ ಮುಂದಾಗಿವೆ. ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆಯ ದಿನಾಂಕ ನಿಗದಿಯಾಗಿದ್ದು, ಪರೀಕ್ಷೆಗೆ 15.97 ಲಕ್ಷ ವೈದ್ಯಕೀಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿರುತ್ತಾರೆ ಹಾಗಾಗಿ ನೀಟ್ ಪರೀಕ್ಷೆಯನ್ನು ಮುಂದೂಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಗಳು ಅನುಮತಿ ಮರುಪರಿಶೀಲನೆಗೆ ಒತ್ತಾಯಿಸಿ ಸಲ್ಲಿಸಿರುವ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್‌ ವಿಚಾರಣೆಗೆ ತೆಗೆದುಕೊಳ್ಳುತ್ತಿದ್ದು, ನಾಳೆ ಮಹತ್ವದ ತೀರ್ಪು ಹೊರಬೀಳಲಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Supreme court hear review of petition by 6 states to postpone jee and neet exams today.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+