ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2017-18 ನೇ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳ JEE/NEET/GATE/GRE ಮುಂತಾದ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಷ್ಟ್ರೋತ್ಥಾನ ಪರಿಷತ್: ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ
ಅರ್ಹ ಅಭ್ಯರ್ಥಿಗಳು ಕಛೇರಿಯಿಂದ ನಿಗದಿತ ಅರ್ಜಿ ನಮೂನೆಗಳನ್ನು ಪಡೆದು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಷರತ್ತುಗಳು
- JEE/NEET/GATE/GRE ಕೋರ್ಸುಗಳಿಗೆ ಅರ್ಹತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
- ಈ ತರಬೇತಿಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತರಬೇತಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸತಕ್ಕದ್ದು.
- ಅಭ್ಯರ್ಥಿಗಳು ಸಂಬಂಧಪಟ್ಟ ತಹಸೀಲ್ದಾರ್ ಅವರಿಂದ ಪಡೆದ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವುದು.
- ಅಭ್ಯರ್ಥಿಗಳು ಕರ್ನಾಟಕ ರಾಜ್ಯದಲ್ಲಿ ವಾಸಿಸುತ್ತಿರುವ ಬಗ್ಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು
ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದ ಪಕ್ಷದಲ್ಲಿ ಅಥವಾ ಅರ್ಜಿ ಅಪೂರ್ಣವಾಗಿದ್ದಲ್ಲಿ, ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.
ಅರ್ಜಿ ಪಡೆಯಲು ಮತ್ತು ಅರ್ಜಿ ಸಲ್ಲಿಸಬೇಕಾದ ಪೂರ್ಣ ವಿಳಾಸ
ಜಂಟಿ ನಿರ್ದೇಶಕರ ಕಛೇರಿ
ಬೆಂಗಳೂರು (ನಗರ) ಜಿಲ್ಲೆ
4ನೇ ಮುಖ್ಯ ರಸ್ತೆ
16ನೇ ಅಡ್ಡರಸ್ತೆ,
ಸಂಪಂಗಿರಾಮನಗರ
ಬೆಂಗಳೂರು-560027
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-13-11-2017
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22240448 ಸಂಪರ್ಕಿಸಬಹುದಾಗಿದೆ
For Daily Alerts