ಕನಕ ದಾಸ ಜಯಂತಿ 2022 : ಕನಕ ದಾಸರ ಜೀವನ ಪರಿಚಯ

ಶ್ರೀ ಕನಕದಾಸರು 15-16 ನೆಯ (1508-1606) ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನಕದಾಸರ ಮೂಲ ಹೆಸರು ತಿಮ್ಮಪ್ಪನಾಯಕ. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನೆಕಾರರು ಮತ್ತು ಪುರಂದರ ದಾಸರೊಂದಿಗೆ ಕರ್ನಾಟಕ ಸಂಗೀತಕ್ಕೆ ಅಪಾರ ಕೊಡುಗೆಯನ್ನು ನೀಡಿದವರು.

ಕನಕ ದಾಸ ಜಯಂತಿ ನಿಮಿತ್ತ ಕನಕ ದಾಸರ ಪರಿಚಯ

ದಾಸ ಸಾಹಿತ್ಯಕ್ಕೆ ವೈಶಿಷ್ಟಪೂರ್ಣವಾದ ಮೆರುಗನ್ನು ತಂದಿತ್ತ ಪಾಂಡಿತ್ಯಪೂರ್ಣ ಕವಿ ಕನಕದಾಸ. ಸಹಜ ಬದುಕಿನಿಂದ ಕೀರ್ತನರಾರರಾಗಿ,ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕನಕದಾಸರು ದಂಡನಾಯಕರಾಗಿದ್ದು, ಯುದ್ಧದಲ್ಲಿ ಸೋತ ನಂತರ ಅವರಿಗೆ ವೈರಾಗ್ಯ ಉಂಟಾಗಿ ಹರಿಭಕ್ತ ದಾಸರಾದರು ಎಂಬ ಮಾತಿದೆ.

ಕನಕದಾಸರು ತಮ್ಮ ಕೀರ್ತನೆಗಳಲ್ಲಿ ಭಕ್ತಿ,ವೈರಾಗ್ಯ, ಭಜನೆಗಳಷ್ಟೇ ಅಲ್ಲದೇ ಹದಿನಾರನೆಯ ಶತಮಾನದ ಸಾಮಾಜಿಕ ವ್ಯವಸ್ಥೆಯ ವಿರುದ್ಧ ಸಮರ ಸಾರಿದ್ದಾರೆ. ಸಾಮಾಜಿಕ ಮಡಿವಂತಿಕೆಯನ್ನು ಕುರಿತು ತಮ್ಮ ಕೀರ್ತನೆಗಳಲ್ಲಿ ವಿಡಂಬಿಸಿದ್ದಾರೆ. ಅಂದಿನ ಸಮಾಜದ ಸ್ಥಿತಿಗತಿಗಳನ್ನು ತಿದ್ದುವ ಪ್ರಯತ್ನ ಮಾಡಿರುವ ದಾಸರಿವರು.

ಕನಕದಾಸರ ಜನನ:

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು.

ಕನಕದಾಸರ ಸಾಧನೆ:

ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರಾಗಿದ್ದರು. ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರೂ ಹೌದು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದವರು. ಕಾಗಿನೆಲೆಯ ಆದಿಕೇಶವರಾಯ ಎಂಬುದು ಇವರ ಕೀರ್ತನೆಗಳ ಅಂಕಿತನಾಮ.

ಕನಕದಾಸರ ಸಾಹಿತ್ಯ ರಚನೆ:

ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು,ಸುಳಾದಿಗಳು,ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗಡೆಯನ್ನು ಮಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಲ್ಲಿವೆ.

1. ಮೋಹನತರಂಗಿಣಿ
2. ನಳಚರಿತ್ರೆ
3. ರಾಮಧಾನ್ಯ ಚರಿತೆ
4. ಹರಿಭಕ್ತಿಸಾರ
5. ನೃಸಿಂಹಸ್ತವ

ಉಡುಪಿಯ ದೇವಸ್ಥಾನದ ಕುರಿತು:

ಅನೇಕರ ನಂಬಿಕೆಯಂತೆ ಉಡುಪಿಯ ದೇವಸ್ಥಾನದಲ್ಲಿ ಕನಕದಾಸರಿಗೆ ಪ್ರವೇಶ ದೊರೆಯದೆ ಹೋದಾಗ ದೇವಸ್ಥಾನದ ಹಿಂದೆ ನಿಂತು ಹಾಡತೊಡಗಿದರಂತೆ ("ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ"). ಆಗ ದೇವಸ್ಥಾನದ ಹಿಂಭಾಗ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. (ಈಗಲೂ ಉಡುಪಿ ಶ್ರೀ ಕೃಷ್ಣ ದೇವಸ್ಥಾನದ ಹಿಂದಗಡೆಯ ಗೋಡೆಯಲ್ಲಿರುವ ಬಿರುಕಿನಲ್ಲಿ ಶ್ರೀಕೃಷ್ಣನನ್ನು ಕಾಣಬಹುದು. ಅಲ್ಲಿ ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು 'ಕನಕನ ಕಿಂಡಿ' ಎಂದು ಕರೆಯಲಾಗಿದೆ).

For Quick Alerts
ALLOW NOTIFICATIONS  
For Daily Alerts

English summary
On the occasion of kanaka dasa jayathi careerindia is giving information about kanaka dasa. Read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X