ಪಿಯುಸಿ ಪರೀಕ್ಷೆ: ಕನ್ನಡದಲ್ಲಿ ಪ್ರಶ್ನೆಪತ್ರಿಕೆ ಮುದ್ರಿಸಲು ಆಗ್ರಹ

ಪಿಯುಸಿ ಪ್ರಶ್ನೆ ಪತ್ರಿಕೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಗಳಲ್ಲಿ ಪ್ರಶ್ನೆಗಳನ್ನು ಮುದ್ರಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹಿಸಿದೆ.

 

ಪ್ರತಿ ಹೋಬಳಿಯಲ್ಲೂ ಕನ್ನಡ ಪಬ್ಲಿಕ್ ಶಾಲೆ ತೆರೆಯಲು ರಾಜ್ಯ ಸರ್ಕಾರ ನಿರ್ಧಾರ

ಪದವಿಪೂರ್ವ (ಪಿಯು) ಮಧ್ಯಂತರ ಹಾಗೂ ಪೂರ್ವಸಿದ್ಧತಾ ಪರೀಕ್ಷೆಗಳ ಪ್ರಶ್ನೆಪತ್ರಿಕೆಯನ್ನು ಕೇವಲ ಒಂದೇ ಭಾಷೆಯಲ್ಲಿ ಮುದ್ರಿಸಿ ಕನ್ನಡವನ್ನು ಕೈಬಿಡುವ ಶಿಕ್ಷಣ ಇಲಾಖೆ ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಸಮಾಧಾನ ವ್ಯಕ್ತಪಡಿಸಿರುವುದಲ್ಲದೆ, ಶಿಕ್ಷಣ ಸಚಿವರಿಗೆ ಪತ್ರವನ್ನು ಬರೆಯಲಾಗಿದೆ.

ಜೆಇಇ ಪರೀಕ್ಷೆ: ಕನ್ನಡದಲ್ಲಿ ಪರೀಕ್ಷೆ ನಡೆಸಲು ಒತ್ತಾಯ

ಕನ್ನಡದಲ್ಲಿ ಪ್ರಶ್ನೆಪತ್ರಿಕೆ ಮುದ್ರಿಸಲು ಆಗ್ರಹ

ಗ್ರಾಮೀಣ ಭಾಗದ ವಿದ್ಯಾರ್ಥಿಗಳು 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೂ ಪಿಯುಸಿಯಲ್ಲಿ ಆಂಗ್ಲ ಮಾಧ್ಯಮ ಆಯ್ಕೆ ಮಾಡಿಕೊಂಡಿರುತ್ತಾರೆ. ಪ್ರಶ್ನೆಗಳು ಎರಡು ಭಾಷೆಯಲ್ಲಿದ್ದಾರೆ, ಪರೀಕ್ಷೆಯಲ್ಲಿನ ಕೆಲ ಇಂಗ್ಲಿಷ್ ಪರಿಭಾಷೆಗಳು ಅರ್ಥವಾಗದಿದ್ದಾಗ ಕನ್ನಡದಲ್ಲಿ ನೋಡಿ ಅರ್ಥ ಮಾಡಿಕೊಳ್ಳುತ್ತಾರೆ.

ಈ ಹಿಂದೆ ವಿದ್ಯಾರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಮುದ್ರಿತ ಪ್ರಶ್ನೆಪತ್ರಿಕೆ ಕೊಡುವ ಪದ್ಧತಿ ಇತ್ತು. ಗ್ರಾಮೀಣ ಪ್ರದೇಶದಿಂದ ಮತ್ತು ಕನ್ನಡ ಮಾಧ್ಯಮದಿಂದ ಬಂದಂತಹ ವಿದ್ಯಾರ್ಥಿಗಳಿಗೆ ಅದರಿಂದ ಸಾಕಷ್ಟು ಅನುಕೂಲವೂ ಆಗುತಿತ್ತು. ಆದರೆ ಈಗ ಆ ನಿಯಮವನ್ನು ಬದಲಾಯಿಸಲಾಗಿದೆ.

 

ಇತ್ತೀಚೆಗೆ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ವಿದ್ಯಾರ್ಥಿ ಆಯ್ಕೆ ಮಾಡಿಕೊಂಡ ಯಾವುದಾದರು ಒಂದು ಭಾಷೆಯ ಪ್ರಶ್ನೆಪತ್ರಿಕೆ ಮಾತ್ರ ಕೊಡುವುದಾಗಿ ತಿಳಿಸಲಾಗಿದೆ.

ವಿದ್ಯಾರ್ಥಿಗಳ ಹಿತ ದೃಷ್ಟಿ ಗಮನಿಸದೆ ಕನ್ನಡವನ್ನು ಕೈಬಿಡುತ್ತಿರುವುದು ಬೇಸರದ ಸಂಗತಿ. ಪ್ರಶ್ನೆಪತ್ರಿಕೆಗಳನ್ನು ಎರಡೂ ಭಾಷೆಯಲ್ಲಿ ಮುದ್ರಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಿ ಎಂದು ಅಧ್ಯಕ್ಷರು ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಗೆ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
The Kannada Development Authority has demanded that the PUC question papers be printed in both Kannada and English languages.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X