ಎಲ್ಲಾ ಶಾಲೆಗಳಲ್ಲೂ ಕನ್ನಡ ಕಡ್ಡಾಯಕ್ಕೆ ಸುತ್ತೋಲೆ ಹೊರಡಿಸಿದ ಸರ್ಕಾರ

Posted By:

ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಭಾಷಾ ಅಲ್ಪಸಂಖ್ಯಾತ ಮತ್ತು ಕೇಂದ್ರೀಯ ಪಠ್ಯಕ್ರಮದ ಶಾಲೆಗಳಲ್ಲೂ ಕನ್ನಡವನ್ನು ಬೋಧಿಸಬೇಕು ಎಂಬ ಸುತ್ತೋಲೆಯನ್ನು ಎಲ್ಲಾ ಶಾಲೆಗಳಿಗೂ ಕಳುಹಿಸಲಾಗಿದೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್‌ ಮೇ 29ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಕನ್ನಡ ಕಲಿಸುವುದನ್ನು ಕಡ್ಡಾಯಗೊಳಿಸಿದೆ ಎಂದು ಹೇಳಿದರು.

ಎಲ್ಲಾ ಶಾಲೆಗಳಲ್ಲೂ ಕನ್ನಡ ಕಡ್ಡಾಯ

ಭಾಷಾ ಅಲ್ಪಸಂಖ್ಯಾತ ಮತ್ತು ಕೇಂದ್ರೀಯ ಪಠ್ಯಕ್ರಮದ ಶಾಲೆಗಳಲ್ಲೂ ಕನ್ನಡವನ್ನು ಒಂದು ಭಾಷೆಯಾಗಿ ಈ ವರ್ಷದಿಂದಲೇ ಕಲಿಸಬೇಕು. ಇಲ್ಲವಾದರೆ ನಿರಾಕ್ಷೇಪಣಾ ಪತ್ರ (ಎನ್‌ಓಸಿ) ರದ್ದು ಮಾಡಲಾಗುವುದು' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್‌ ಎಚ್ಚರಿಸಿದ್ದಾರೆ.

ರಾಜ್ಯದಲ್ಲಿರುವ ತಮಿಳು, ತೆಲುಗು, ಮರಾಠಿ ಮುಂತಾದ ಭಾಷಾ ಅಲ್ಪಸಂಖ್ಯಾತ ಶಾಲೆಗಳು ಹಾಗೂ ಕೇಂದ್ರೀಯ ವಿದ್ಯಾಲಯ, ಸಿಬಿಎಸ್‌ಇ, ಐಸಿಎಸ್‌ಇ ಪಠ್ಯಕ್ರಮದ ಶಾಲೆಗಳು ಕಡ್ಡಾಯವಾಗಿ ಕನ್ನಡ ಬೋಧಿಸಬೇಕು ಮತ್ತು ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷನ್ನು ಪರಿಚಯಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷನ್ನು ಒಂದು ವಿಷಯವನ್ನಾಗಿ ಕಲಿಸಲು ಈಗಾಗಲೇ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಈ ವರ್ಷದಿಂದಲೇ ಇಂಗ್ಲಿಷ್ ಕಲಿಕೆ ಆರಂಭವಾಗಲಿದೆ ಎಂದರು.

ಭಾಷಾ ಮಾಧ್ಯಮ ಆದೇಶ

ಒಂದರಿಂದ ನಾಲ್ಕನೇ ತರಗತಿವರೆಗೆ ಖಾಸಗಿ ಶಾಲೆಗಳು ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕು ಎಂದು 1994ರಲ್ಲಿ ಭಾಷಾ ಮಾಧ್ಯಮ ಆದೇಶವನ್ನು ಕರ್ನಾಟಕ ಸರ್ಕಾರ ಹೊರಡಿಸಿತ್ತು.

ಖಾಸಗಿ ಶಾಲೆಗಳು ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು, ಕೋರ್ಟ್ ಈ ಆದೇಶವನ್ನು ರದ್ದುಗೊಳಿಸಿ ತೀರ್ಪುನೀಡಿತ್ತು. ಕರ್ನಾಟಕ ಸರ್ಕಾರ ಇದನ್ನು ಪ್ರಶ್ನಿಸಿ ಸುಪ್ರೀಕೋರ್ಟ್ ಮೆಟ್ಟಿಲೇರಿತ್ತು. 2008, ಜುಲೈ 2ರಂದು ಭಾಷಾ ಮಾಧ್ಯಮ ನೀತಿಯನ್ನು ಖಾಸಗಿ ಶಾಲೆಗಳ ಮೇಲೆ ಹೇರಲು ಬರುವುದಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ನಂತರ 2015ರಲ್ಲಿ ಮಾತೃಭಾಷೆಯನ್ನು ತೀರ್ಮಾನಿಸುವುದು ಪೋಷಕರು ಮತ್ತು ಮಕ್ಕಳ ಮೂಲಭೂತ ಹಕ್ಕು ಎಂದು ಕೋರ್ಟ್ ಹೇಳಿಕೆ ನೀಡುವ ಮೂಲಕ ಮತ್ತೆ ಕನ್ನಡ ಕಡ್ಡಾಯಕ್ಕೆ ಅಂತ್ಯ ಹಾಡಿತ್ತು.

English summary
Starting this academic year, students will be taught Kannada in all schools in the State, including private, linguistic minority and Central board schools.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia