ಐಸಿಎಸ್ಇ, ಸಿಬಿಎಸ್ಇ ಶಾಲೆಗಳಿಗೆ ಕನ್ನಡ ಭಾಷೆ ಕಡ್ಡಾಯ ಅನ್ವಯವಾಗುವುದಿಲ್ಲ.

Posted By:

ಐಸಿಎಸ್ಇ ಮತ್ತು ಸಿಬಿಎಸ್ಇ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಮಾಡಬೇಕೆಂಬ ಹೋರಾಟಕ್ಕೆ ಮತ್ತೆ ಸೋಲುಂಟಾಗಿದೆ. ಎರಡು ದಶಕಗಳಿಂದ ಕನ್ನಡವನ್ನು ಕಡ್ಡಾಯವಾಗಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಿದ್ದರು ಯಾವುದೇ ಪ್ರಯೋಜನವಾಗದಿರುವುದು ಇಲ್ಲಿ ಸ್ಮರಿಸಬಹುದು.

ಕನ್ನಡ ಭಾಷಾ ಕಲಿಕಾ ಕಾಯ್ದೆ 2015 ರಂತೆ ಒಂದರಿಂದ ಹತ್ತನೇ ತರಗತಿಯವರೆಗೂ ರಾಜ್ಯದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕು ಎಂದು ಹೇಳಲಾಗಿತ್ತು. ಆದರೆ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರದ ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕನ್ನಡ ಭಾಷೆಯನ್ಹು ಕಡ್ಡಾಯ ಮಾಡಲು ಕೇವಲ ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಶಾಲೆಗಳಿಗಷ್ಟೇ ಅವಕಾಶವಿದೆ. ಐಸಿಎಸ್ಇ ಮತ್ತು ಸಿಬಿಎಸ್ಇ ಶಾಲೆಗಳು ಕೇಂದ್ರ ಸರ್ಕಾರದ ಹಿಡಿತದಲ್ಲಿರುತ್ತವೆ, ಹಾಗಾಗಿ ರಾಜ್ಯದ ಯಾವುದೇ ಕಾನೂನುಗಳು ಆ ಶಾಲೆಗಳಿಗೆ ಅನ್ವಯಿಸುವುದಿಲ್ಲ ಎಂದು ಬೆಂಗಳೂರಿನ ಡಿಡಿಪಿಐ ಅಶ್ವತ್ ನಾರಾಯಣ್ ಗೌಡ ತಿಳಿಸಿದ್ದಾರೆ.

ಕನ್ನಡ ಭಾಷೆ ಕಡ್ಡಾಯವಿಲ್ಲ

ಪ್ರಾದೇಶಿಕ ಭಾಷೆಯನ್ನು ಪ್ರೋತ್ಸಾಹಿಸಲು ನಮಗೂ ಆಸಕ್ತಿಯಿದೆ ಆದರೆ ಕನ್ನಡವನ್ನು ಮೊದಲ ಭಾಷೆ ಮಾಡಬೇಕೆಂದರೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡುವಂತಾಗಬೇಕು. ಕನ್ನಡವನ್ನು ಒಂದು ವಿಷಯವನ್ನಾಗಿ ಓದಲು ತ್ರಿಭಾಷಾ ನೀತಿ ಅಳವಡಿಸಿಕೊಳ್ಳ ಬೇಕಾಗುತ್ತದೆ. ಆಗ ಕನ್ನಡವನ್ನು ಮೂರನೇ ಭಾಷೆಯನ್ನಾಗಿ ಆಯ್ಕೆಮಾಡಿಕೊಳ್ಳಲು ಅವಕಾಶವಿರುತ್ತದೆ ಎಂದು ದೆಹಲಿ ಪಬ್ಲಿಕ್ ಸ್ಕೂಲ್ ಆಢಳಿತ ಸದಸ್ಯರಾದ ಮನ್ಸೂರ್ ಆಲಿ ಖಾನ್ ಅಭಿಪ್ರಯಾ ಪಟ್ಟಿದ್ದಾರೆ.

ಸದ್ಯ ಹಿಂದಿಯನ್ನು ತೃತೀಯ ಭಾಷೆಯನ್ನಾಗಿ ಮಾಡಲಾಗಿದೆ, ದ್ವಿತೀಯ ಭಾಷೆಯಾಗಿ ಕನ್ನಡವನ್ನು ಒಂದರಿಂದ ಹತ್ತನೇ ತರಗತಿಯವರೆಗೂ ಆಯ್ದುಕೊಳ್ಳಲು ಅವಕಾಶವಿರುತ್ತದೆ. ಮಕ್ಕಳ ಶಿಕ್ಷಣ ಮತ್ತು ಭಾಷೆಯ ವಿಚಾರವಾಗಿ ಪೋಷಕರು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನ ಲಿಟಲ್ ಫ್ಲವರ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಗಾಯತ್ರಿ ದೇವಿ ಹೇಳಿದ್ದಾರೆ.

ಒಂದರಿಂದ ನಾಲ್ಕನೇ ತರಗತಿವರೆಗೆ ಖಾಸಗಿ ಶಾಲೆಗಳು ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕು ಎಂದು 1994ರಲ್ಲಿ ಭಾಷಾ ಮಾಧ್ಯಮ ಆದೇಶವನ್ನು ಕರ್ನಾಟಕ ಸರ್ಕಾರ ಹೊರಡಿಸಿತ್ತು. ಖಾಸಗಿ ಶಾಲೆಗಳು ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು, ಕೋರ್ಟ್ ಈ ಆದೇಶವನ್ನು ರದ್ದುಗೊಳಿಸಿ ತೀರ್ಪುನೀಡಿತ್ತು. ಕರ್ನಾಟಕ ಸರ್ಕಾರ ಇದನ್ನು ಪ್ರಶ್ನಿಸಿ ಸುಪ್ರೀಕೋರ್ಟ್ ಮೆಟ್ಟಿಲೇರಿತ್ತು.

 2008, ಜುಲೈ 2ರಂದು ಭಾಷಾ ಮಾಧ್ಯಮ ನೀತಿಯನ್ನು ಖಾಸಗಿ ಶಾಲೆಗಳ ಮೇಲೆ ಹೇರಲು ಬರುವುದಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ನಂತರ 2015ರಲ್ಲಿ  ಮಾತೃಭಾಷೆಯನ್ನು ತೀರ್ಮಾನಿಸುವುದು ಪೋಷಕರು ಮತ್ತು ಮಕ್ಕಳ ಮೂಲಭೂತ ಹಕ್ಕು ಎಂದು ಕೋರ್ಟ್ ಹೇಳಿಕೆ ನೀಡುವ ಮೂಲಕ ಮತ್ತೆ ಕನ್ನಡ ಕಡ್ಡಾಯಕ್ಕೆ ಅಂತ್ಯ ಹಾಡಿತ್ತು.

English summary
ಕನ್ನಡ ಭಾಷಾ ಕಲಿಕಾ ಕಾಯ್ದೆ 2015 ರಂತೆ ಒಂದರಿಂದ ಹತ್ತನೇ ತರಗತಿಯವರೆಗೂ ರಾಜ್ಯದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕು ಎಂದು ಹೇಳಲಾಗಿತ್ತು. ಆದರೆ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರದ ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia