ಯುವಬರಹಗಾರರಿಗೆ ಪುಸ್ತಕ ಪ್ರಕಟಿಸಲು ಸುವರ್ಣಾವಕಾಶ

ಅರ್ಜಿದಾರರು ಕನಿಷ್ಠ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಡೀಕೃತ ಎಸ್ ಎಸ್ ಎಲ್ ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು.

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2016 ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿದಾರರು ಕನಿಷ್ಠ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಡೀಕೃತ ಎಸ್ ಎಸ್ ಎಲ್ ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಪುಸ್ತಕ ಪ್ರಕಟಿಸಲು ಸುವರ್ಣಾವಕಾಶ

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯ ಡಿ.ಟಿ.ಪಿ ಮಾಡಿಸಿದಾಗ 1/8 ಡೆಮಿ ಅಳತೆಯಲ್ಲಇ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.

ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೇ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ/ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ ಕಾರಣ ಹಸ್ತಪ್ರತಿಯ/ ಡಿ.ಟಿ.ಪಿ ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಲು ತಿಳಿಸಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ

ಅರ್ಜಿಗಳನ್ನು ದಿನಾಂಕ: 11-09-2017 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು-560002

ಕನ್ನಡ ಪುಸ್ತಕ ಪ್ರಾಧಿಕಾರ

ಪುಸ್ತಕದ ಮಹತ್ವವನ್ನು ಅರಿತ ಕರ್ನಾಟಕ ಸರ್ಕಾರವು 1993ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವನ್ನು ಸ್ಥಾಪಿಸಿತು. ಕನ್ನಡ ಪುಸ್ತಕೋದ್ಯಮವನ್ನು ಜನಪರವಾಗಿ ರೂಪಿಸಿ, ದೃಢವಾಗಿ, ವ್ಯಾಪಕವಾಗಿ ಮತ್ತು ಸಮಗ್ರವಾಗಿ ಬೆಳೆಸಿ ಭದ್ರವಾಗಿ ಬೇರೂರುವಂತೆ ಮಾಡುವ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಮುಖ ಧ್ಯೇಯೋದ್ದೇಶಗಳೆಂದರೆ

  • ಕನ್ನಡದಲ್ಲಿ ಲೇಖಕ-ಪ್ರಕಾಶಕ-ಮಾರಾಟಗಾರರ ಓದುಗರ ನಡುವೆ ಗಾಢ ಸಂಬಂಧವನ್ನು ಬೆಸೆಯುವುದು.
  • ಓದುಗರಲ್ಲಿ ಉತ್ತಮ ವಾಚನಾಭಿರುಚಿಯನ್ನು ಬೆಳೆಸುವುದು.
  • ರಾಜ್ಯಾದ್ಯಂತ ಓದುಗರಿಗೆ ಒಳ್ಳೆಯ ಪುಸ್ತಕಗಳು ಸುಲಭ ಬೆಲೆಯಲ್ಲಿ ದೊರಕುವಂತೆ ಮಾಡುವುದು.
  • ಕನ್ನಡ ಪುಸ್ತಕಗಳನ್ನು ಖರೀದಿಸಿ ಓದುಗರಿಗೆ ರಾಜ್ಯಾದ್ಯಂತ ದೊರೆಯುವಂತೆ ಮಾಡುವುದು.
  • ಕನ್ನಡ ಭಾಷೆ, ಸಾಹಿತ್ಯ ಹಾಗು ಜ್ಞಾನ ಶಾಖೆಯ ಪುಸ್ತಕಗಳನ್ನು ಪ್ರಕಟಿಸುವುದು.
  • ರಾಜ್ಯಾದ್ಯಂತ ಕನ್ನಡ ಪುಸ್ತಕ ಮಳಿಗೆಗಳನ್ನು ಸ್ಥಾಪಿಸುವುದು.

ಹೆಚ್ಚಿನ ಮಾಹಿತಿಗಾಗಿ

ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-ದೂರವಾಣಿ ಸಂಖ್ಯೆ 080-22484516/22017704

More News  

For Quick Alerts
ALLOW NOTIFICATIONS  
For Daily Alerts

English summary
kannada pustaka pradhikara invites applications from new writers to publish their books.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+