Karnataka PGCET 2021 Answer Key : ಕೀ ಉತ್ತರಗಳನ್ನು ವೀಕ್ಷಿಸುವುದು ಹೇಗೆ ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ PGCET 2021 ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ವೀಕ್ಷಿಸಬಹುದು.

 ಕರ್ನಾಟಕ ಪಿಜಿಸಿಇಟಿ 2021 ತಾತ್ಕಾಲಿಕ ಕೀ ಉತ್ತರ ರಿಲೀಸ್

ಕರ್ನಾಟಕ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನವೆಂಬರ್ 11 ಮತ್ತು ನವೆಂಬರ್ 14, 2021 ರಂದು ನಡೆಸಲಾಗಿತ್ತು. ಈ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಅಧಿಕೃತ ವೆಬ್‌ಸೈಟ್ cetonline.karnataka.gov.in/kea ನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಇ-ಮೇಲ್ ಮೂಲಕ ಸಮರ್ಥನೆಯೊಂದಿಗೆ ನವೆಂಬರ್ 28,2021ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದು. ಆಕ್ಷೇಪಣೆಗಳನ್ನು ವಿಷಯವನ್ನು ಸಲ್ಲಿಸುವಾಗ, ಆವೃತ್ತಿ ಕೋಡ್ ಮತ್ತು ಪ್ರಶ್ನೆ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು. ಸಮರ್ಥನೆ ಇಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ತಿಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸಿವಿಲ್ ಇಂಜಿನಿಯರಿಂಗ್ (CE), ಕೆಮಿಕಲ್ ಇಂಜಿನಿಯರಿಂಗ್ (ಕೆಮ್ ಇಂಜಿನಿಯರಿಂಗ್), ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (CSE), ಎಂಸಿಎ, ಎಂಬಿಎ ಮತ್ತು ಎಂ.ಟೆಕ್/ಎಂಆರ್ಕ್ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುತ್ತದೆ.

ಕರ್ನಾಟಕ ಪಿಜಿಸಿಇಟಿ ಪರೀಕ್ಷೆಗಳನ್ನು ನವೆಂಬರ್ 11 ಮತ್ತು ನವೆಂಬರ್ 14, 2021 ರಂದು ನಡೆಸಲಾಗಿದ್ದು, ಎಂಇ/ಎಂಟೆಕ್ ಮಾರ್ಚ್ ಪರೀಕ್ಷೆಗಳನ್ನು ನವೆಂಬರ್ 11 ರಂದು ಬೆಳಿಗ್ಗೆ 10.30 ರಿಂದ 12.30 ರವರೆಗೆ (ಟೈಪ್ A) ಮತ್ತು ಮಧ್ಯಾಹ್ನ 2.30 ರಿಂದ 4.30ರ(ಟೈಪ್ B) ವರೆಗೆ ನಡೆಸಲಾಯಿತು. ಎಂಬಿಎ/ಎಂಸಿಎ ಪರೀಕ್ಷೆಗಳನ್ನು ನವೆಂಬರ್ 14 ರಂದು ಬೆಳಿಗ್ಗೆ 10.30 ರಿಂದ 12.30ರ ವರೆಗೆ (MCA) ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 4.30ರ (MBA) ವರೆಗೆ ನಡೆಸಲಾಗಿದೆ.

ಅಭ್ಯರ್ಥಿಗಳು ಪಿಜಿಸಿಇಟಿ ತಾತ್ಕಾಲಿಕ ಕೀ ಉತ್ತರಗಳನ್ನು ವೀಕ್ಷಿಸುವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್ ಗೆ ಹೋಗಿ ತಾತ್ಕಾಲಿಕ ಕೀ ಉತ್ತರಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಪಿಡಿಎಫ್ ಸ್ವರೂಪದಲ್ಲಿ ನೀಡಲಾದ ತಾತ್ಕಾಲಿಕ ಕೀ ಉತ್ತರ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4 : ಅಭ್ಯರ್ಥಿಗಳು ಕೀ ಉತ್ತರಗಳನ್ನು ವೀಕ್ಷಿಸಿ ನಂತರ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು.

ಅಭ್ಯರ್ಥಿಗಳು ತಾತ್ಕಾಲಿಕ ಕೀ ಉತ್ತರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KEA released Karnataka PGCET 2021 provisional answer key. Here is how to check.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+