ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ. ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅನುವಾಗುವಂತೆ ಇಲಾಖೆಯು ಇಂದು ಫಲಿತಾಂಶ ಘೋಷಿಸಿದೆ.
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ರುಜುವಾತುಗಳನ್ನು ನಮೂದಿಸಿ ಫಲಿತಾಂಶವನ್ನು ವೀಕ್ಷಿಸಬಹುದು.

ಪ್ರಥಮ ಪಿಯುಸಿ ಫಲಿತಾಂಶ ವೀಕ್ಷಿಸುವುದು ಹೇಗೆ ? :
ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://pue.kar.nic.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
ಸ್ಟೆಪ್ 4 : ಫಲಿತಾಂಶವು ಪರದೆಯ ಮೇಲೆ ಮೂಡುವುದು
ಸ್ಟೆಪ್ 5 : ಫಲಿತಾಂಶ ವೀಕ್ಷಿಸಿದ ಬಳಿಕ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದುಕೊಳ್ಳಿ.

ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಫಲಿತಾಂಶವನ್ನು SMS ಮೂಲಕವೂ ಪರಿಶೀಲಿಸಬಹುದು. ಈ ವರ್ಷ ಕರ್ನಾಟಕ ಪದವಿಪೂರ್ವ ಮಂಡಳಿಯು ಪ್ರಥಮ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಏಪ್ರಿಲ್ 22 ರಿಂದ ಆರಂಭಗೊಂಡಿದ್ದು, ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು. ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.