Karnataka 2nd PUC Final Time Table 2022 : ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ

ರಾಜ್ಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆಯು ಪ್ರಕಟ ಮಾಡಿದೆ. ಪ್ರಸಕ್ತ ಸಾಲಿನ ದ್ವಿತೀಯ ಪಿಯು ಅಂತಿಮ ಪರೀಕ್ಷೆಗಳು ಏಪ್ರಿಲ್ 22 ರಿಂದ ಮೇ 18,2022ರ ವರೆಗೆ ನಡೆಯಲಿವೆ. ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳು ಸಂಪೂರ್ಣ ವೇಳಾಪಟ್ಟಿಯನ್ನು ವೀಕ್ಷಿಸಲು ಮುಂದೆ ಓದಿ.

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿ ಪ್ರಕಟ

ಈ ಮುಂಚೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್ 16ರಿಂದ ಮೇ 6ರವರೆಗೆ ನಡೆಸುವುದಾಗಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿತ್ತು. ಆದರೆ ಎನ್‌ಟಿ‌ಎ ನಡೆಸುವ ಜೆಇಇ ಪರೀಕ್ಷೆಯ ಕೆಲ ಪತ್ರಿಕೆಗಳು ಒಂದೇ ದಿನಾಂಕದಂದು ಬಂದಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಯನ್ನು ಏಪ್ರಿಲ್ 22 ರಿಂದ ಮೇ 11,2022ರ ವರೆಗೆ ನಡೆಸುವುದಾಗಿ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿತ್ತು.

ಈ ತಾತ್ಕಾಲಿಕ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಮಾರ್ಚ್ 5ರ ಸಂಜೆ 5 ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ ಕಾಮನ್ ಲಾ ಅಡ್ಮಿಷನ್ ಟೆಸ್ಟ್ (ಸಿಎಲ್‌ಎಟಿ), ಎಐಎಂಎ ಯುಜಿಎಟಿ ಪರೀಕ್ಷೆ ಹಾಗೂ ನವೋದಯ ವಿದ್ಯಾಲಯ ಪರೀಕ್ಷೆ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೆಶಕರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಹೀಗಿದೆ:

ಎಪ್ರಿಲ್ 22, 2022: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಎಪ್ರಿಲ್ 23, 2022: ಗಣಿತ, ಶಿಕ್ಷಣ
ಎಪ್ರಿಲ್ 25, 2022: ಅರ್ಥಶಾಸ್ತ್ರ
ಎಪ್ರಿಲ್ 26, 2022: ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ರಸಾಯನಶಾಸ್ತ್ರ, ಮೂಲ ಗಣಿತ
ಎಪ್ರಿಲ್ 27, 2022: ತಮಿಳು, ಮರಾಠಿ, ತೆಲಗು, ಮಲಯಾಳಮ್ ಉರ್ದು, ಸಂಸ್ಕೃತ, ಫ್ರೆಂಚ್
ಎಪ್ರಿಲ್ 28, 2022: ಕನ್ನಡ, ಅರೇಬಿಕ್
ಮೇ 02, 2022: ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮೇ 04, 2022: ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ ನೆಸ್
ಮೇ 05, 2022: ಇಂಗ್ಲಿಷ್
ಮೇ 10, 2022: ಇತಿಹಾಸ, ಭೌತಶಾಸ್ತ್ರ
ಮೇ 12, 2022: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14, 2022: ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಕಂಪ್ಯೂಟರ್
ಮೇ 17, 2022: ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 18, 2022: ಹಿಂದಿ

2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಮಾರ್ಚ್ 14,2022 ರಿಂದ ಮಾರ್ಚ್ 25,2022ರ ವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ನಿಗದಿ ಮಾಡಲಾಗಿದೆ. ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ 28,2022 ರಿಂದ ಏಪ್ರಿಲ್ 13,2022 ರ ವರೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇಕಡ.30 ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಿದ್ದು, ಶೇಕಡ.70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುವುದು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇಕಡ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುವುದು.

More News  

For Quick Alerts
ALLOW NOTIFICATIONS  
For Daily Alerts

English summary
Karnataka 2nd PUC Exam Time Table 2022: The examination for the second PUC will begin from April 22. Here is the detailed exam schedule. Take a look.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+