Karnataka 2nd PUC Result 2022 : ಜೂನ್ 18ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ನಾಳೆ ಪ್ರಕಟಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು "ನಾಳೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಮತ್ತು ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು ಎಂದು ಟ್ವೀಟ್ ಮಾಡಿದ್ದಾರೆ.

 

ಕೋವಿಡ್ ಮತ್ತು ಹಿಜಾಬ್ ನಡುವೆಯೇ ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು, 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ನಾಳೆ ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು. ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ತಿಳಿಯಿರಿ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸುವುದು ಹೇಗೆ ? :

ಸ್ಟೆಪ್ 1: ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ http://karresults.nic.in./ ಅಥವಾ http://pue.kar.nic.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಜೊತೆಗೆ ಕೇಳಲಾಗಿರುವ ಮಾಹಿತಿಯನ್ನು ತುಂಬಿ
ಸ್ಟೆಪ್ 4: ಸ್ಕ್ರೀನ್ ಮೇಲೆ ಫಲಿತಾಂಶ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
Karnataka second puc results will be announced on june 18. Here is how to check results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X