Karnataka 2nd PUC Exam Time Table 2022 : ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಏಪ್ರಿಲ್ 16,2022 ರಿಂದ ಮೇ 6,2022ರ ವರೆಗೆ ನಡೆಸಲು ನಡೆಸಲು ತೀರ್ಮಾನಿಸಲಾಗಿದ್ದು, ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ವೇಲಾಪಟ್ಟಿಯನ್ನು ವೀಕ್ಷಿಸಬಹುದು.

ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ವಿಷಯವಾರು ಅಂತಿಮ ವೇಳಾಪಟ್ಟಿ :

ಏಪ್ರಿಲ್​ 16,2022 ಗಣಿತ
ಏಪ್ರಿಲ್​ 18,2022 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರಿಲ್ 19,2022 ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್
ಏಪ್ರಿಲ್ 20,2022 ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 21,2022 ಉರ್ದು ಮತ್ತು ಸಂಸ್ಕೃತ
ಏಪ್ರಿಲ್ 22,2022 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರಿಲ್ 23,2022 ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ,
ಏಪ್ರಿಲ್ 25,2022 ಅರ್ಥಶಾಸ್ತ್ರ
ಏಪ್ರಿಲ್ 26,2022 ಹಿಂದಿ
ಏಪ್ರಿಲ್ 28,2022 ಕನ್ನಡ
ಏಪ್ರಿಲ್ 30,2022 ಸಮಾಜಶಾಸ್ತ್, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 2,2022 ಭೋಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4,2022 ಇಂಗ್ಲೀಷ್
ಮೇ 6,2022 ಲೆಕ್ಕಶಾಸ್ತ್ರ, ಐಚ್ಚಿಕ ಕನ್ನಡ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್ 16,2022 ರಿಂದ ಮೇ 4,2022ರ ವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಯನ್ನು ಸಲ್ಲಿಸಲು ಜನವರಿ 18,2022 ರಿಂದ ಫೆಬ್ರವರಿ 1,2022ರ ವರೆಗೆ ಅಂದರೆ 15 ದಿನಗಳ ವರೆಗೆ ಕಾಲಾವಕಾಶ ನೀಡಲಾಗಿತ್ತು. ತದನಂತರ ಆಕ್ಷೇಪಣೆಯನ್ನು ಪರಿಶೀಲಿಸಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಮಾರ್ಚ್ 14,2022 ರಿಂದ ಮಾರ್ಚ್ 25,2022ರ ವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ನಿಗದಿ ಮಾಡಲಾಗಿದೆ.
ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ 28,2022 ರಿಂದ ಏಪ್ರಿಲ್ 13,2022 ರ ವರೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇಕಡ.30 ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಿದ್ದು, ಶೇಕಡ.70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುವುದು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇಕಡ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುವುದು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ಕಲ್ಪಿಸಲಾಗಿದೆ.

ಇನ್ನು ಪ್ರಥಮ ಪಿಯುಸಿ ಭಾಷಾ ವಿಷಯಗಳಲ್ಲಿ 2020-21ನೇ ಸಾಲಿನಲ್ಲಿ ಕಡಿತಗೊಳಿಸಲಾಗಿದ್ದ ಶೇಕಡ 30 ರಷ್ಟು ಪಠ್ಯಕ್ರಮವನ್ನು 2021-22ನೇ ಸಾಲಿನಲ್ಲಿಯೂ ಕಡಿತಗೊಳಿಸಲಾಗಿದೆ. ಐಚ್ಛಿಕ ವಿಷಯಗಳಲ್ಲಿ ಶೇಕಡ.100 ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುವುದು.

For Quick Alerts
ALLOW NOTIFICATIONS  
For Daily Alerts

English summary
Karnataka 2nd PUC Exam Time Table 2022: The examination for the second PUC will be conducted from April 16 to May 6, 2022. Here is the detailed exam schedule. Take a look.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X