Karnataka 2nd PUC Mid Term 2021 Exam : ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ರಿಲೀಸ್

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಿದೆ. ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪರಿಷ್ಕೃತ ವೇಳಾಪಟ್ಟಿಯನ್ನು ವೀಕ್ಷಿಸಬಹುದು.

ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿರುವ ಹೊಸ ವೇಳಾಪಟ್ಟಿಯ ಪ್ರಕಾರ ಡಿಸೆಂಬ್ 09, 2021 ರಿಂದ ಡಿಸೆಂಬರ್ 23,2021 ರವರೆಗೆ ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಈ ಭಾರಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಏಕಕಾಲದಲ್ಲಿ ನಡೆಸಲು ನಿರ್ಧರಿಸಿರುವುದಾಗಿ ಇಲಾಖೆಯು ಪ್ರಕಟಣೆ ಹೊರಡಿಸಿದೆ.

ಈ ಮೊದಲು ಹೊರಡಿಸಿದ್ದ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಯು ನವೆಂಬರ್ 29 ರಂದು ಪ್ರಾರಂಭವಾಗಿ ಡಿಸೆಂಬರ್ 10, 2021 ರಂದು ಕೊನೆಗೊಳ್ಳಲಿತ್ತು. ಆದರೆ ಪರೀಕ್ಷೆಯ ಮಾದರಿ ಮತ್ತು ಪರೀಕ್ಷೆಯ ವಿಧಾನದಲ್ಲಿನ ಬದಲಾವಣೆಗಳನ್ನು ಕಾರ್ಯಗತಗೊಳಿಸಲು ಶಾಲೆಗಳಿಗೆ ಹೆಚ್ಚಿನ ಸಮಯವನ್ನು ನೀಡಲು ಪರೀಕ್ಷಾ ದಿನಾಂಕಗಳನ್ನು ಮುಂದೂಡಲಾಗಿದ್ದು, ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಈ ಭಾರಿಯ ಮೌಲ್ಯಮಾಪನ ಕಾರ್ಯವನ್ನು ಆಯಾ ಕಾಲೇಜಿನ ಉಪನ್ಯಾಸಕರಿಂದ ಕಾಲೇಜು ಹಂತದಲ್ಲೇ ಪ್ರಾಂಶುಪಾಲರ ನೇತೃತ್ವದಲ್ಲಿ ನಡೆಸಲು ಅನುಮತಿ ನೀಡಲಾಗಿದೆ. ಮೌಲ್ಯಮಾಪನ ಮುಗಿಸಿದ ನಂತರ ವಿದ್ಯಾರ್ಥಿಗಳಿಗೆ ಅಂಕಗಳನ್ನು ತಿಳಿಸಿ ಪರೀಕ್ಷೆ ಮುಗಿದ 15 ದಿನಗಳ ಒಳಗೆ SATS Portal ನಲ್ಲಿ ನಮೂದಿಸಬೇಕು. ಪರೀಕ್ಷೆಯನ್ನು ಕಟ್ಟಿನಿಟ್ಟಾಗಿ ನಡೆಸುವುದು ಮತ್ತು ಯಾವುದೇ ಲೋಪದೋಷಗಳಿಲ್ಲದೆ ಮೌಲ್ಯಮಾಪನ ಕಾರ್ಯವನ್ನು ನಿರ್ವಹಿಸುವ ಸಂಪೂರ್ಣ ಜವಾಬ್ದಾರಿ ಆಯಾ ಕಾಲೇಜುಗಳ ಪ್ರಾಂಶುಪಾಲರದ್ದೇ ಆಗಿರುತ್ತದೆ ಎಂದು ಇಲಾಖೆ ಪ್ರಕಟಣೆಯಲ್ಲಿ ಹೇಳಿದೆ.

ಪ್ರಥಮ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಯನ್ನು ಕಾಲೇಜು ಹಂತದಲ್ಲೇ ನಡೆಸಲು ತಿಳಿಸಲಾಗಿದೆ. ಪ್ರಾಂಶುಪಾಲರು ತಮ್ಮ ಕಾಲೇಜು ಉಪನ್ಯಾಸಕರಿಂದಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆ ನಡೆಸಿ, ಮೌಲ್ಯಮಾಪನ ಮಾಡಿಸುವುದು ಹಾಗೂ ವಿದ್ಯಾರ್ಥಿಗಳಿಗೆ ವಿಷಯವಾರು ಅಂಕಗಳನ್ನು ತಿಳಿಸಿ ವಿದ್ಯಾರ್ಥಿಗಳ ಅಂಕಗಳನ್ನು ಸಹ SATS Portal ನಲ್ಲಿ ನಮೂದಿಸಲು ಸೂಚಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ಕರ್ನಾಟಕ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ 2021: ಪರಿಷ್ಕೃತ ವೇಳಾಪಟ್ಟಿಯನ್ನು ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ವಿದ್ಯಾರ್ಥಿಗಳು ಮೊದಲು ಪೂರ್ವ ವಿಶ್ವವಿದ್ಯಾಲಯ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://pue.kar.nic.in// ಗೆ ಭೇಟಿ ನೀಡಿ.
ಸ್ಟೆಪ್ 2: ಹೊಂ ಪೇಜ್ ನಲ್ಲಿ ಲಭ್ಯವಿರುವ ಕರ್ನಾಟಕ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ 2021 ಪರಿಷ್ಕೃತ ವೇಳಾಪಟ್ಟಿ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಪಿಡಿಎಫ್ ಪುಟವು ತೆರೆಯಲಿದೆ.
ಸ್ಟೆಪ್ 4: ನಂತರ ವಿದ್ಯಾರ್ಥಿಗಳು ಪರೀಕ್ಷೆಯ ದಿನಾಂಕಗಳನ್ನು ವೀಕ್ಷಿಸಿ ಜೊತೆಗೆ ಅಧಿಕೃತ ಸೂಚನೆಯನ್ನು ಪರಿಶೀಲಿಸಿಕೊಳ್ಳಿ
ಸ್ಟೆಪ್ 5: ಅಗತ್ಯವಿದ್ದಲ್ಲಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಅಧಿಕೃತ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka pre education department released second puc mid term 2021 exam revised schedule.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X