ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ 2020ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಮಾಡಿದೆ. ಈ ವರ್ಷ ಶೇಕಡಾ 69.20ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕೃತ ಮಾಹಿತಿ ನೀಡಿದ್ದಾರೆ.
ಈ ವರ್ಷ ಒಟ್ಟು 5,56,267 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರಲ್ಲಿ 3,84,947 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ಶೇ.0.7ರಷ್ಟು ಫಲಿತಾಂಶ ಹೆಚ್ಚಾಗಿದ್ದು ಕಳೆದ ವರ್ಷ ಶೇ.61.73ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ಶೇ.55.29ರಷ್ಟು ಫಲಿತಾಂಶ ಗಳಿಸಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ ಮತ್ತು ಹುಡುಗರು ಶೇ.54.77ರಷ್ಟು ಫಲಿತಾಂಶವನ್ನ ಪಡೆದಿದ್ದಾರೆ.
ಶೇ.90.71 ಫಲಿತಾಂಶ ಪಡೆಯುವುದರೊಂದಿಗೆ ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳು ಮೊದಲ ಸ್ಥಾನದಲ್ಲಿ, ಶೇ. 81.53 ಫಲಿತಾಂಶದೊಂದಿಗೆ ಕೊಡಗು ಜಿಲ್ಲೆ ದ್ವಿತೀಯ ಸ್ಥಾನದಲ್ಲಿ 56.08 ಶೇಕಡಾದೊಂದಿಗೆ ಚಿತ್ರದುರ್ಗ, ರಾಯಚೂರು ಶೇ.56.23 ಶೇಕಡಾದೊಂದಿಗೆ ಮತ್ತು ವಿಜಯಪುರ 54.22 ಶೇಕಡಾದೊಂದಿಗೆ ಕೊನೆಯ ಮೂರು ಸ್ಥಾನಗಳಿವೆ.
ವಿದ್ಯಾರ್ಥಿಗಳ ಮೊಬೈಲ್ ಗೆ ಎಸ್‌ಎಂಎಸ್ ಮೂಲಕ ಸಂದೇಶ ರವಾನೆಯಾಗಲಿದೆ. ಅಲ್ಲದೇ ವಿದ್ಯಾರ್ಥಿಗಳು ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪಲಿತಾಂಶವನ್ನು ವೀಕ್ಷಿಸಬಹುದು.