Karnataka 2nd PUC Registration Number 2021: ದ್ವಿತೀಯ ಪಿಯುಸಿ ಫಲಿತಾಂಶ ಜು.20ಕ್ಕೆ ಪ್ರಕಟ, ಫಲಿತಾಂಶ ವೀಕ್ಷಿಸೋದು ಹೇಗೆ ?

ದ್ವಿತೀಯ ಪಿಯು ಫಲಿತಾಂಶ ಜು.20ರಂದು ಪ್ರಕಟ

Karnataka Second PUC Result 2021 : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ 20ರಂದು ಪ್ರಕಟಿಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಾರಿ ಪರೀಕ್ಷೆ ರದ್ದಾದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಪಡೆದಿರುವುದಿಲ್ಲ ಹಾಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ತಮ್ಮ ರಿಜಿಸ್ಟ್ರೇಶನ್ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದೆ.

 

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿತ್ತು. ಇದೀಗ ಪರೀಕ್ಷಾ ಫಲಿತಾಂಶವನ್ನು ಸಿಬಿಎಸ್‌ಇ ಮಾದರಿಯಲ್ಲಿ ಎಸ್ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯು ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲು ಸಿದ್ಧತೆ ಕೈಗೊಳ್ಳಲಾಗಿದ್ದು, ಗ್ರೇಡ್ ಬದಲು ಅಂಕಗಳ ಆಧಾರದಲ್ಲಿ ಜುಲೈ 20 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದೆ.

ದ್ವಿತೀಯ ಪಿಯು ಫಲಿತಾಂಶ ಜು.20ರಂದು ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸುವುದು ಹೇಗೆ?:

ಪ್ರತಿ ವರ್ಷ ವಿದ್ಯಾರ್ಥಿಗಳು ನೊಂದಣಿ ಸಂಖ್ಯೆಯನ್ನು ಬಳಸಿ ಫಲಿತಾಂಶ ವೀಕ್ಷಿಸುತ್ತಿದ್ದರು. ಆದರೆ ಈ ಭಾರಿ ಪರೀಕ್ಷೆಗೆ ಹಾಜರಾಗದ ಕಾರಣ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ Know Your Registration Number ನಲ್ಲಿ ಜಿಲ್ಲೆ ಮತ್ತು ಕಾಲೇಜು ಹೆಸರನ್ನು ಆಯ್ಕೆ ಮಾಡಿಕೊಂಡು ಅಲ್ಲಿ ನೀಡಲಾಗಿರುವ ಲಿಂಕ್ ಅನ್ನು ಪರಿಶೀಲಿಸಬೇಕು. ವಿವರಗಳಲ್ಲಿ ವಿದ್ಯಾರ್ಥಿಗಳ ಹೆಸರು ಮತ್ತು ಅವರ ಪೋಷಕರ ಹೆಸರು ಹಾಗೂ ನೊಂದಣಿ ಸಂಖ್ಯೆಯನ್ನು ನೀಡಲಾಗಿರುತ್ತದೆ. ಅದನ್ನು ವಿದ್ಯಾರ್ಥಿಗಳು ಖಚಿತ ಪಡಿಸಿಕೊಳ್ಳಬೇಕು. ತದನಂತರ ಜುಲೈ 20ರಂದು ಪ್ರಕಟವಾಗಲಿರುವ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

 

ವಿದ್ಯಾರ್ಥಿಗಳು ರಿಜಿಸ್ಟ್ರೇಶನ್ ನಂಬರ್ ಜನರೇಟ್ ಮಾಡುವ ಲಿಂಕ್ ಬಳಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka second puc results 2021 will be announced on july 20. Here is how to check and how to find registration number.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X