Karnataka 2nd PUC Result 2021 : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ರಾಜ್ಯದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ : ಪರೀಕ್ಷೆ ಇಲ್ಲದೆಯೇ ಎಲ್ಲಾ ವಿದ್ಯಾರ್ಥಿಗಳು ಪಾಸ್

ಖಾಸಗಿ ಅಭ್ಯರ್ಥಿಗಳಿಗೂ ಕೂಡ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟ ಮಾಡಲಾಗಿದ್ದು, ವಿದ್ಯಾರ್ಥಿಗಳು ಸ್ಯಾಟ್ಸ್ ನಲ್ಲಿ ನೋಂದಣಿ ಮಾಡಿಕೊಂಡಿರುವ ಮೊಬೈಲ್ ನಂಬರ್ ಗೆ ಫಲಿತಾಂಶವನ್ನು ಪಡೆಯಲಿದ್ದಾರೆ. ಪಿಯಸಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳಿಗೆ ಅಸಮಧಾನ ವಿದ್ದರೆ ಮರು ಪರೀಕ್ಷೆಗೆ ಹಾಜರಾಗಬಹುದು ಎಂದು ಸಚಿವರು ತಿಳಿಸಿದ್ದಾರೆ.

ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು, ವಿದ್ಯಾರ್ಥಿಗಳಿಗೆ ಹತ್ತನೇ ತರಗತಿಯಲ್ಲಿ ವಿಷಯವಾರು ಪಡೆದಿದ್ದ ಅಂಕಗಳ ಶೇ. 45 ರಷ್ಟು ಅಂಕ ಗಳಿಗೆ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕದಲ್ಲಿ ಶೇ. 45 ಅಂಕವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ ಹಾಗೂ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಯ ಶೈಕ್ಷಣಿಕ ಚಟುವಟಿಕೆಗೆ ಶೇ. 10 ರಷ್ಟು ಅಂಕಗಳನ್ನು ನೀಡಿ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಜೊತೆಗೆ ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಿಗೆ ಶೇ. 5 ಸೇರಿಸಿ ಫಲಿತಾಂಶ ನೀಡುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಪುನರಾವರ್ತಿತ ಅಭ್ಯರ್ಥಿಗಳ ಫಲಿತಾಂಶ ಕೂಡ ಈಗಲೇ ಪ್ರಕಟವಾಗಲಿದೆ ಅವರಿಗೆ ಕನಿಷ್ಠ ಉತ್ತೀರ್ಣ ಅಂಕ ನೀಡಿ ಪಾಸು ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಫಲಿತಾಂಶವನ್ನು ರಿಜೆಕ್ಟ್ ಮಾಡುವ ವಿದ್ಯಾರ್ಥಿಗಳಿಗೆ ಆಗಸ್ಟ್‌ ನಲ್ಲಿ ಪರೀಕ್ಷೆ :

ರಿಸಲ್ಟ್ ಅನ್ನು ರಿಜೆಕ್ಟ್ ಮಾಡುವ ವಿದ್ಯಾರ್ಥಿಗಳಿಗೆ ಆಗಸ್ಟ್ 19 ರಿಂದ ಸೆಪ್ಟೆಂಬರ್ 3ರ ವರೆಗೆ ಪರೀಕ್ಷೆ ನಡೆಸಲಾಗುವುದು. ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

2,51,686ಕಾಮರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಹಾಜರು:

2,51,686 ದ್ವಿತೀಯ ಪಿಯುಸಿ ಕಾಮರ್ಸ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದವರ ಸಂಖ್ಯೆ :

ಈ ಬಾರಿ 2,19,777 ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

600ಕ್ಕೆ 600 ಅಂಕ ಪಡೆದವರ ಸಂಖ್ಯೆ:

ಈ ಭಾರಿ 2239 ವಿದ್ಯಾರ್ಥಿಗಳು 600ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ.

ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 6,66,497 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ.​ 4,50,706 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದು, ಅದರಲ್ಲಿ 1,95,650 ವಿದ್ಯಾರ್ಥಿಗಳು ಹಾಗೂ 2,52,056 ವಿದ್ಯಾರ್ಥಿನಿಯರು ಇದ್ದಾರೆ. 1,47,055 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 68,729 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಪುನರಾವರ್ತಿತ 76 306 ವಿದ್ಯರ್ಥಿಗಳು ಕೂಡ ಪಾಸ್ ಆಗಿದ್ದಾರೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಈ ಜಿಲ್ಲೆಯ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕವನ್ನು ಪಡೆದಿದ್ದಾರೆ. ಬೆಂಗಳೂರು ದಕ್ಷಿಣ ಎರಡನೇ ಸ್ಥಾನ ಗಳಿಸಿದ್ದು, 302 ವಿದ್ಯಾರ್ಥಿಗಳು 600ಕ್ಕೆ 600 ಅಂಕವನ್ನು ಪಡೆದಿದ್ದಾರೆ. ಬೆಂಗಳೂರು ಉತ್ತರ 3ನೇ ಸ್ಥಾನ ಪಡೆದುದುಕೊಂಡಿದ್ದು, 261 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಸಿಕ್ಕಿದೆ. ಉಡುಪಿ ಜಿಲ್ಲೆಗೆ 4ನೇ ಸ್ಥಾನದಲ್ಲಿದ್ದು, ಜಿಲ್ಲೆಯ 149 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಸಿಕ್ಕಿದೆ. ಹಾಸನ ಜಿಲ್ಲೆ 5ನೇ ಸ್ಥಾನ ಪಡೆದಿದ್ದು, 104 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕಗಳು ದೊರೆತಿದೆ.

ರಾಜ್ಯದಲ್ಲಿ ಈ ಭಾರಿ ವಿಜ್ಞಾನ ಹಾಗೂ ಕಲಾ ವಿಭಾಗಕ್ಕಿಂತಲೂ ವಾಣಿಜ್ಯ ವಿದ್ಯಾರ್ಥಿಗಳೇ ಹೆಚ್ಚು ಮಂದಿ ಪಿಯುಸಿ ಪರೀಕ್ಷೆ ತೆಗೆದುಕೊಂಡಿದ್ದರು. ಶಿಕ್ಷಣ ಸಚಿವರು ನೀಡಿದ ಮಾಹಿತಿ ಪ್ರಕಾರ ವಾಣಿಜ್ಯ ವಿಭಾಗದಲ್ಲಿ 2,51, 686 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2, 19, 777 ಹಾಗೂ ಕಲಾ ವಿಭಾಗದಲ್ಲಿ 1,95, 304 ವ್ಯಾಸಂಗ ಮಾಡುತ್ತಿದ್ದರು. ಅದರಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಂಖ್ಯೆ - 1,47, 594 ಆಗಿದ್ದು, ನಗರ, ಮಹಾನಗರ ಪ್ರದೇಶದಲ್ಲಿ ನೆಲೆಸಿರುವ 5,18,903 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಫಲಿತಾಂಶ ವೀಕ್ಷಿಸುವುದು ಹೇಗೆ ? :

ಸ್ಟೆಪ್ 1: ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ http://karresults.nic.in./ ಅಥವಾ http://pue.kar.nic.in/ ಗೆ ಭೇಟಿ ನೀಡಿ

ಸ್ಟೆಪ್ 2: ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಜೊತೆಗೆ ಕೇಳಲಾಗಿರುವ ಮಾಹಿತಿಯನ್ನು ತುಂಬಿ

ಸ್ಟೆಪ್ 3: ಸ್ಕ್ರೀನ್ ಮೇಲೆ ಫಲಿತಾಂಶ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
Karnataka PUC Results 2021 Live Updates: Results declared on karresults.nic.in. Check latest updates, pass percentage, passing criteria and more updates on 2nd PUC Karnataka.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X