Karnataka 2nd PUC Result 2022 : ದ್ವಿತೀಯ ಪಿಯುಸಿ ಫಲಿತಾಂಶ ಔಟ್, ಈ ಭಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಸುದ್ದಿಗೋಷ್ಟಿ ನಡೆಸಿ ಪ್ರಕಟ ಮಾಡಿದ್ದಾರೆ. ಎಂದಿನಂತೆ ಈ ವರ್ಷವೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, 61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ : ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 4,02,697 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 3,37,006 ಬಾಲಕಿಯರ ಪೈಕಿ 2,31,586 ವಿದ್ಯಾರ್ಥಿಗಳು ಮತ್ತು 3,46,557 ಬಾಲಕರ ಪೈಕಿ 1,91,380 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 68.72ರಷ್ಟು ಬಾಲಕಿಯರು ಮತ್ತು 55.22ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ.

ಪಿಯುಸಿ ಫಲಿತಾಂಶವನ್ನು ಜೂನ್ 18ರಂದು ಬೆಳಿಗ್ಗೆ 11ರಂದು ಪ್ರಕಟ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ನಿನ್ನೆ ಟ್ವೀಟ್ ಮಾಡಿ ತಿಳಿಸಿದ್ದರು.

ಕೋವಿಡ್ ಮತ್ತು ಹಿಜಾಬ್ ನಡುವೆಯೇ ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು, 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.

ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸುವುದು ಹೇಗೆ ? :

ಸ್ಟೆಪ್ 1: ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ http://karresults.nic.in./ ಅಥವಾ http://pue.kar.nic.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಜೊತೆಗೆ ಕೇಳಲಾಗಿರುವ ಮಾಹಿತಿಯನ್ನು ತುಂಬಿ
ಸ್ಟೆಪ್ 4: ಸ್ಕ್ರೀನ್ ಮೇಲೆ ಫಲಿತಾಂಶ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಕಳೆದ ವರ್ಷ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20 ರಂದು ಪ್ರಕಟಿಸಲಾಗಿತ್ತು. 5,90,153 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು, ಈ ಪೈಕಿ 2,239 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಗಳಿಸಿದ್ದರು.

For Quick Alerts
ALLOW NOTIFICATIONS  
For Daily Alerts

English summary
Karnataka second puc results released. Here is how to check results.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X