ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶವನ್ನು ಪ್ರಕಟ ಮಾಡಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ 14 ರಂದು ಪ್ರಕಟ ಮಾಡಿತ್ತು. ಇದೀಗ ಮೌಲ್ಯಮಾಪನ ಫಲಿತಾಂಶವನ್ನು ಪ್ರಕಟ ಮಾಡಿದೆ. ಇನ್ನು ಪರೀಕ್ಷೆಗೆ ಗೈರಾದವರು ಮತ್ತು ಅನುತ್ತೀರ್ಣರಾದವರು ಸೆ. 7 ರಿಂದ 18 ರವರೆಗೆ ನಿಗದಿಯಾಗಿರುವ ಪೂರಕ ಪರೀಕ್ಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ.
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ ವೀಕ್ಷಿಸುವುದು ಹೇಗೆ:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://pue.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "REVALUATION RESULTS MARCH 2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಸ್ಕ್ರೀನ್ ಮೇಲೆ 3 ಲಿಂಕ್ ಲಭ್ಯವಿದೆ ಅದರಲ್ಲಿ ನಿಮ್ಮ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಫಲಿತಾಂಶವು ಪರದೆಯ ಮೇಲೆ ಮೂಡುವುದು
ಸ್ಟೆಪ್ 5: ಅಭ್ಯರ್ಥಿಗಳು ಫಲಿತಾಂಶದ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ