ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 18.2020ರ ವರೆಗೆ ನಡೆದಿದ್ದವು. ಪರೀಕ್ಷೆಗೆ ಹಾಜರಾದ 2.12 ಲಕ್ಷ ಅಭ್ಯರ್ಥಿಗಳಲ್ಲಿ ಶೇ. 41.28ರಷ್ಟು ಅಭ್ಯರ್ಥಿಗಳು ಮುಂದಿನ ಶಿಕ್ಷಣಕ್ಕೆ ಅರ್ಹತೆ ಪಡೆದಿದ್ದಾರೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ:
ಸ್ಟೆಪ್ 1: ಅಭ್ಯರ್ಥಿಗಳು ಆಫೀಶಿಯಲ್ ವೆಬ್‌ಸೈಟ್ http://karresults.nic.in/indexpuc_2020.asp ಗೆ ಲಾಗಿನ್ ಆಗಿ
ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಕಾಣಿಸುವ ಟಾಪ್ ಮೆನು ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಿಮ್ಮ ರಿಜಿಸ್ಟ್ರೇಶನ್ ಸಂಖ್ಯೆ ನಮೂದಿಸಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 5: ಸ್ಕ್ರೀನ್ ಮೇಲೆ ಫಲಿತಾಂಶ ಮೂಡುತ್ತದೆ. ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ