2nd PUC Supplementary Exam 2020 Results: ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ

ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪತ್ರಿ, ಮರು ಮೌಲ್ಯಮಾಪನ ಮತ್ತು ಮರುಎಣಿಕೆಗೆ ಪದವಿಪೂರ್ಣ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಇಂದಿನಿಂದ ಅರ್ಜಿ ಹಾಕಿ

2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 19,2020ರ ವರೆಗೆ ಒಟ್ಟು 305 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಪರೀಕ್ಷೆಗೆ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ಹಾಜರಾದವರಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಮತ್ತು ಶೇ.41.28 ರಷ್ಟು ಫಲಿತಾಂಶ ಕಂಡುಬಂದಿದೆ.

ಇದೀಗ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ, ಮರು ಮೌಲ್ಯಮಾಪನ ಮತ್ತು ಮರುಎಣಿಕೆಗೆ ಆನ್‌ಲೈನ್ ಮೂಲಕ ಇಂದಿನಿಂದ ಅಕ್ಟೋಬರ್ 16,2020ರೊಳಗೆ ಅರ್ಜಿ ಸಲ್ಲಿಸಬಹುದು.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಯನ್ನು ಅಕ್ಟೋಬರ್ 14,2020 ರಿಂದ ಅಕ್ಟೋಬರ್ 19,2020ರ ವರೆಗೆ ಅಂತರ್ಜಾಲ http://pue.kar.nic.in/ ದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶವಿರುತ್ತದೆ.

ಸ್ಕ್ಯಾನಿಂಗ್ ಪ್ರತಿ ತೆಗೆದುಕೊಂಡ ವಿದ್ಯಾರ್ಥಿಗಳು ಅಕ್ಟೋಬರ್ 19 ರಿಂದ ಅಕ್ಟೋಬರ್ 23,2020ರ ವರೆಗೆ ಮರುಮೌಲ್ಯಮಾಪನ ಹಾಗೂ ಮರುಎಣಿಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಯು ಸ್ಕ್ಯಾನಿಂಗ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530/-ರೂ ಪಾವತಿಸಬೇಕಿರುತ್ತದೆ. ಮರುಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1,670/-ರೂಗಳನ್ನು ಪಾವತಿಸಬೇಕು. ಮುಖ್ಯವಾಗಿ ಅಂಕಗಳ ಮರುಎಣಿಕೆಗೆ ಯಾವುದೇ ಶುಲ್ಕವಿರುವುದಿಲ್ಲ..

ಸೂಚನೆ:

ಮರುಮೌಲ್ಯಮಾಪನದಲ್ಲಿ ನಿಗದಿಪಡಿಸಿರುವ ಅಂಕಗಳಿಗಿಂತ ಹೆಚ್ಚಿನ ಅಂಕಗಳು ಅಥವಾ ಕಡಿಮೆ ಅಂಕಗಳು ಬಂದಲ್ಲಿ ಅಂಕಗಳೊಂದಿಗೆ ಫಲಿತಾಂಶವನ್ನು ಪರಿಷ್ಕರಿಸಿ ಪ್ರಕಟಿಸಲಾಗುವುದು. ಹಾಗೂ ಮೊದಲು ಪಡೆದ ಅಂಕಗಳನ್ನು ಮರು ಸ್ಥಾಪಿಸಲು ಅವಕಾಶವಿರುವುದಿಲ್ಲ. ಮರುಮೌಲ್ಯಮಾಪನದ ಫಲಿತಾಂಶವನ್ನು ಇಲಾಖೆ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

More News  

For Quick Alerts
ALLOW NOTIFICATIONS  
For Daily Alerts

English summary
Karnataka 2nd PUC supplementary results 2020 has been released and students can apply for revaluations and retotalling.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+