67ನೇ ಕನ್ನಡ ರಾಜ್ಯೋತ್ಸವ ನವೆಂಬರ್ 1ರ ಇತಿಹಾಸದಿಂದ

66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ರಾಜ್ಯೋತ್ಸವ ಮತ್ತು ಕನ್ನಡ ಭಾವುಟ ಹಿಂದಿನ ಕತೆ ಮಾತ್ರ ರೋಚಕ.

By Kavya

67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ರಾಜ್ಯೋತ್ಸವ ಮತ್ತು ಕನ್ನಡ ಭಾವುಟದ ಹಿಂದಿನ ಕತೆ ಮಾತ್ರ ರೋಚಕ.

ಕನ್ನಡ ರಾಜ್ಯೋತ್ಸವ ಇತಿಹಾಸ:

ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನ. ಇಂದಿನ ಕರ್ನಾಟಕ ಮೊದಲಿಗೆ ಮೈಸೂರು ಹೆಸರಿನಿಂದ ಗುರುತಿಸಿಕೊಂಡಿತ್ತು.

ಕನ್ನಡ ರಾಜ್ಯೋತ್ಸವ ಮತ್ತು ಕನ್ನಡ ಭಾವುಟದ ಇತಿಹಾಸ

ಸ್ವಾತಂತ್ರದ ನಂತರ, ಒಡೆಯರ್ ಮಹಾರಾಜ ಭಾರತದ ಭಾಗವಾಗಲು ಸಮ್ಮತಿಸಿದರು. 1950ರಲ್ಲಿ , ಮೈಸೂರು ಭಾರತದ ರಾಜ್ಯವಾಯಿತು, ಹಾಗು ಪೂರ್ವ ಮಹಾರಾಜ 1957ರ ವರಗೆ ರಾಜ್ಯಪಾಲರಾದರು.

''ಏಕೀಕರಣ'' ಚಳುವಳಿ 19ನೆಯ ಶತಮಾನಡ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956 ರಾಜ್ಯ ಪುನಸ್ಸಂಘಟನೆ ಕಾಯಿದೆ ಯೊಂದಿಗೆ ಮುಕ್ತಾಯವಾಯಿತು, ಇದರಿಂದ ಕೂರ್ಗ್, ಮದ್ರಾಸ್, ಹೈದರಾಬಾದ್, ಹಾಗು ಬಾಂಬೆ ರಾಜ್ಯದ ಭಾಗಗಳನ್ನು ಮೈಸೂರು ರಾಜ್ಯಕ್ಕೆ ಸೇರ್ಪಡಿಸಲಾಯಿತು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಪುನರ್ನಾಮಕರಣ ಮಾಡಲಾಯಿತು.

ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳನ್ನು ಒಳಗೊಂಡಿತ್ತು. ಅಂದಿನಿಂದ ನವೆಂಬರ್ 1 ನ್ನು ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

ಕರ್ನಾಟಕ ಹೆಸರು:

ಕರ್ನಾಟಕ ಪದದ ಮೂಲದಬಗ್ಗೆ ಹಲವು ಅಭಿಪ್ರಾಯಗಳಿದ್ದರೂ ಸಾಮಾನ್ಯವಾಗಿ "ಕರು" ಮತ್ತು "ನಾಡು" ಸೇರಿ "ಎತ್ತರದ ಭೂಮಿ" ಎಂಬರ್ಥದ ಕರುನಾಡು ಪದದಿಂದ ಉಗಮವಾಗಿದೆ ಎನ್ನಲಾಗಿದೆ. ಕರು ಎಂದರೆ ಕಪ್ಪು, ನಾಡು ಎಂದರೆ ಪ್ರದೇಶ ಎಂದು ಅರ್ಥೈಸಿಕೊಂಡರೆ ಬಯಲು ಸೀಮೆಯ ಕಂಡು ಕಪ್ಪು ಹತ್ತಿ ಮಣ್ಣಿನಿಂದಾಗಿ ಹೆಸರು ಬಂದಿದೆ ಎಂದೂ ಹೇಳಲಾಗುತ್ತದೆ. ಕೃಷ್ಣಾ ನದಿಯ ದಕ್ಷಿಣಕ್ಕೆ ಎರಡೂ ಕಡೆ ಜಲಾವೃತವಾದ ಪ್ರದೇಶವಾದ್ದರಿಂದ ಬ್ರಿಟಿಷರ ಕಾಲದಲ್ಲಿ ಕಾರ್ನಾಟಿಕ್ ಅಥವಾ ಕರ್ನಾಟಕ ಹೆಸರು ಬಳಕೆಗೆ ಬಂತು.

ಕನ್ನಡ ಭಾವುಟ:

ಕರ್ನಾಟಕಕ್ಕೆ ತನ್ನದೇ ಆದ ಪ್ರತ್ಯೇಕ ಬಾವುಟವಿದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯೋತ್ಸವ ದಿನದಂದು ಕರ್ನಾಟಕ ರಾಜ್ಯಾದ್ಯ೦ತ ಮಹದಾನ೦ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ.

ಕನ್ನಡಕ್ಕೊಂದು ಬಾವುಟ ಅವಶ್ಯಕತೆಯನ್ನು ಮನಗೊಂಡ ಕನ್ನಡದ ಹೋರಾಟಗಾರರಾದ ಎಂ ರಾಮಮೂರ್ತಿಗಳು ಹಳದಿ ಹಾಗೂ ಕೆಂಪು ಬಣ್ಣ ಬಳಸಿ, ಬಾವುಟವನ್ನು ಸಿದ್ದಪಡಿಸಿದರು. ಮೂಲತಃ ಹಳದಿ ಬಣ್ಣವು ಕನ್ನಡಾಂಬೇಯ ಆರಿಶಿನ ಮತ್ತು ಕುಂಕುಮವನ್ನು ಸೂಚಿಸುತ್ತದೆ ಹಾಗೂ ಹಳದಿ ಬಣ್ಣವು ಶಾಂತಿ, ಸೌಹಾರ್ದತೆ ಸೂಚಿಸಿದರೆ ಕೆಂಪು ಬಣ್ಣ ಕ್ರಾಂತಿಯ ಸಂದೇಶ ನೀಡುತ್ತದೆ. ಕನ್ನಡಿಗರೂ ಶಾಂತಿಗೆ ಬದ್ಧ, ಯುದ್ಧಕ್ಕೂ ಸಿದ್ಧ ಎಂಬ ಸಂದೇಶವನ್ನು ನೀಡುತ್ತದೆ .

ಆರಂಭದಲ್ಲಿ ಕನ್ನಡ ಬಾವುಟ ಸಿದ್ಧಗೊಂಡಾಗ ಬಾವುಟದ ಮಧ್ಯೆ ಕರ್ನಾಟಕದ ಭೂಪಟ ಮತ್ತು ಅದರ ನಡುವಿನಲ್ಲಿ ಏಳು ಕವಲುಗಳುಳ್ಳ ತೆನೆಯ ಚಿತ್ರವಿತ್ತು. ಮುದ್ರಿಸಲು ಸ್ವಲ್ಪ ಕಷ್ಟವಾಗುತ್ತಿದ್ದರಿಂದ ಅದನ್ನು ತೆಗೆದು ಕೇವಲ ಹಳದಿ ಮತ್ತು ಕೆಂಪು ಬಣ್ಣವನ್ನು ಮಾತ್ರ ಉಳಿಸಿಕೊಳ್ಳಲಾಯಿತು.

ರಾಜ್ಯೋತ್ಸವ ಆಚರಣೆ:

ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ.

ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ. ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ.ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.

ಕರ್ನಾಟಕದಲ್ಲಿನ ಇನ್ನಿತರ ಪ್ರದೇಶಗಳಾದ ಮುಂಬಯಿ, ದೆಹಲಿ ಮುಂತಾದ ಕಡೆಯು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇದಲ್ಲದೆ ಸಾಗರೋತ್ತರದಲ್ಲಿ ಕನ್ನಡ ಸಂಸ್ಥೆ, ಅಮೇರಿಕಾದ, ಸಿಂಗಾಪುರ್, ದುಬೈ , ಮಸ್ಕಟ್, ದಕ್ಷಿಣ ಕೊರಿಯಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಮೊದಲಾದ ಕಡೆಗಳಲ್ಲಿ ನೆಲೆಸಿರುವ ಕನ್ನಡಿಗರು ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಾರೆ.

For Quick Alerts
ALLOW NOTIFICATIONS  
For Daily Alerts

English summary
Kannada Rajyotsava the "Birth of the Karnataka state" is celebrated on 1 November of every year. This was the day in 1956 when all the Kannada language-speaking regions of South India were merged to form the state of Karnataka.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X