ಕರ್ನಾಟಕ ಬ್ಯಾಂಕ್ ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಬ್ಯಾಂಕ್ ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಜುಲೈ 20,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. ಆಗಸ್ಟ್ 3,2019 ರಂದು ಪರೀಕ್ಷೆಯು ನಡೆಯಲಿದ್ದು, ಅಭ್ಯರ್ಥಿಗಳು ಜುಲೈ 26 ರಿಂದ ಆಗಸ್ಟ್ 3,2019ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಕರ್ನಾಟಕ ಬ್ಯಾಂಕ್ ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ಆನ್‌ಲೈನ್ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಕರ್ನಾಟಕ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://karnatakabank.com/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Career" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Recruitment Of Probationary Clerks"ನ ಕೆಳಗೆ ನೀಡಲಾಗಿರುವ "Online Examination Call Letter-Download" Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಸೇವ್ ಮಾಡಿಕೊಂಡು ಒಂದು ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶಪತ್ರವನ್ನು ಪಡೆಯಲು ಇಲ್ಲಿ


Click it and Unblock the Notifications











