
ಕರ್ನಾಟಕ ಬ್ಯಾಂಕ್ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಕರ್ನಾಟಕ ಬ್ಯಾಂಕ್ ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಸಂದರ್ಶನ ಪ್ರಕ್ರಿಯೆಯು ಫೆಬ್ರವರಿ 22,2021 ರಿಂದ ಮಾರ್ಚ್ 2,2021ರ ವರೆಗೆ ನಡೆಯಲಿದೆ. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಅಭ್ಯರ್ಥಿಗಳು ಸಂದರ್ಶನ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕರ್ನಾಟಕ ಬ್ಯಾಂಕ್ ಅಧಿಕೃತ ವೆಬ್‌ಸೈಟ್ https://karnatakabank.com/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ careers ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Interview Call Letter Download ಮುಂದಿರುವ click here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











