KCET Admit Card 2022 : ಸಿಇಟಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2022ರ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ cetonline.karnataka.gov.in/kea ಅಥವಾ kea.kar.nic.in ಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ಸಿಇಟಿ ಪ್ರವೇಶ ಪತ್ರ ಪ್ರಕಟ

ಕರ್ನಾಟಕದಲ್ಲಿ ಎಂಜಿನಿಯರಿಂಗ್, ಕೃಷಿ, ವೈದ್ಯಕೀಯ, ಫಾರ್ಮಸಿಯಂತಹ ಪದವಿಪೂರ್ವ ಕಾರ್ಯಕ್ರಮಗಳಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯಿದಾಗಿದೆ. ಕೆಸಿಇಟಿ 2022 ಪರೀಕ್ಷೆಗಳು ಜೂನ್ 16, 17 ಮತ್ತು 18ರಂದು ನಿಗದಿಪಡಿಸಲಾಗಿದೆ. ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಪರೀಕ್ಷೆ ನಡೆಯಲಿದ್ದರೆ, ಜೂ.17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಇನ್ನು ಜೂ.18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ. ಕೆಸಿಇಟಿ ಪೆನ್ ಮತ್ತು ಪೇಪರ್ ಆಧಾರಿತ ಪರೀಕ್ಷೆಯಾಗಿದೆ.

ಪ್ರವೇಶ ಪತ್ರ ಬಿಡುಗಡೆಯಾದ ಬಳಿಕ ಅಭ್ಯರ್ಥಿಗಳು ತಮ್ಮ ಬಳಕೆದಾರ ID ಗಳು ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ರಚಿಸಲಾದ ಪಾಸ್‌ವರ್ಡ್‌ನೊಂದಿಗೆ ಲಾಗ್ ಇನ್ ಮಾಡುವ ಮೂಲಕ KCET 2022 ಪ್ರವೇಶ ಕಾರ್ಡ್ ಅನ್ನು ಪ್ರವೇಶಿಸಲು ಮತ್ತು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. ಅಭ್ಯರ್ಥಿಗಳು ಕರ್ನಾಟಕ UGCET 2022 ರ ಪ್ರಿಂಟ್‌ಔಟ್ ಅನ್ನು ತೆಗೆದುಕೊಳ್ಳಬೇಕು ಮತ್ತು ಮಾನ್ಯವಾದ ID ಪುರಾವೆಯೊಂದಿಗೆ KCET ಪರೀಕ್ಷಾ ಹಾಲ್‌ಗೆ ಕೊಂಡೊಯ್ಯಬೇಕು.

ಕರ್ನಾಟಕ ಸಿಇಟಿ ಪ್ರವೇಶ ಪತ್ರ ಪ್ರಕಟ

KCET ಪ್ರವೇಶ ಪತ್ರ 2022 : ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೆಪ್ 1: KCET 2022 ಅಧಿಕೃತ ವೆಬ್‌ಸೈಟ್‌ kea.kar.nic.in ಅಥವಾ cetonline.karnataka.gov.in/kea ಗೆ ಭೇಟಿ ನೀಡಿ

ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: KCET 2022 ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡಿ.

ಸ್ಟೆಪ್ 4: ಯಶಸ್ವಿ ಲಾಗಿನ್ ಆದ ನಂತರ KEA CET 2022 ರ ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು

ಸ್ಟೆಪ್ 5: ಪ್ರವೇಶ ಪತ್ರ ಡೌನ್‌ಲೋಡ್ ಮಾಡಿ ಮತ್ತು ಅದರ ಪ್ರಿಂಟ್‌ಔಟ್ ತೆಗೆದುಕೊಳ್ಳಿ

KCET 2022 ಪ್ರವೇಶ ಪತ್ರವು ಪರೀಕ್ಷೆಯ ದಿನದ ಮಾರ್ಗಸೂಚಿಗಳು, ಪರೀಕ್ಷಾ ಕೇಂದ್ರದ ವಿಳಾಸ, KCET ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡುವ ಸಮಯ ಮತ್ತು ಇತರ ವೈಯಕ್ತಿಕ ಮಾಹಿತಿಯುಳ್ಳ ವಿವರಗಳನ್ನು ಒಳಗೊಂಡಿರುತ್ತದೆ. ಈ ವಿವರಗಳ ಜೊತೆಗೆ KCET 2022 ರ ವೇಳಾಪಟ್ಟಿಯನ್ನು ಸಹ ಹೊಂದಿರುತ್ತದೆ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka common entrance test admit card 2022 has been released. Here is how to download it.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X