Karnataka CET Exam 2021 : ಇಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಆ. 14 ಮತ್ತು 21ರಂದು ಅಣಕು ಪರೀಕ್ಷೆ ; ಇಂದೇ ರಿಜಿಸ್ಟರ್ ಮಾಡಿ

ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಅಣಕು ಪರೀಕ್ಷೆ

2021ನೇ ಸಾಲಿನ ಕರ್ನಾಟಕ ಸಿಇಟಿ ಪರೀಕ್ಷೆಯನ್ನು ರಾಜ್ಯದಾದ್ಯಂತ ಆಗಸ್ಟ್ 28,29 ರಿಂದ 30ರವರೆಗೆ ಸುಮಾರು 500 ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಹಾಜರಾಗಲಿರುವ ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಇಟಿ ಪ್ರೆಪ್‌ಮಾಸ್ಟರ್ ಅಣಕು ಪರೀಕ್ಷೆಯನ್ನು ಇದೇ ಆಗಸ್ಟ್ 14 ಹಾಗೂ 21ರಂದು ನಡೆಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು www.cetprepmaster.in ವೆಬ್‌ಸೈಟ್ ನಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು ಅಣಕು ಪರೀಕ್ಷೆಯಲ್ಲಿ ಪಾಲ್ಗೊ ಳ್ಳಬಹುದು.

 

ಅಣಕು ಪರೀಕ್ಷೆ ಎರಡು ದಿನಗಳ ಕಾಲ ಸಂಜೆ 6 ಗಂಟೆಗೆ ನಡೆಯಲಿದೆ. ವಿದ್ಯಾರ್ಥಿಗಳು ಕ್ಯೂಆರ್ ಕೋಡ್ ಮೂಲಕ ಪ್ರೆಪ್‌ಮಾಸ್ಟರ್ ಅಣಕು ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದು.

ಈ ಭಾರಿ ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲಾಗಿದೆ. ವಿದ್ಯಾರ್ಥಿಗಳ ಫಲಿತಾಂಶವನ್ನು ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ನೀಡಲಾಗಿದೆ. ಈ ವರ್ಷ ಪರೀಕ್ಷೆ ನಡೆಯದ ಕಾರಣ ಸೀಟು ಹಂಚಿಕೆಗೆ ಪಿಯುಸಿಯ ಶೇ.50 ಅಂಕ ಪರಿಗಣಿಸದೇ ಇರಲು ಹಾಗೂ ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ಕಲ್ಪಿಸುವುದಾಗಿ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಪ್ರತಿ ವರ್ಷ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಿಇಟಿ ಬರೆಯಲು ಕನಿಷ್ಠ ಶೇ.40-45 ಅಂಕಗಳನ್ನು ಕಡ್ಡಾಯವಾಗಿ ಪಡೆಯಬೇಕಿತ್ತು. ಈ ಅಂಕಗಳನ್ನು ಪಡೆಯದಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವ ಅವಕಾಶವಿರಲಿಲ್ಲ. ಆದರೆ ಈ ಭಾರಿ ಪರೀಕ್ಷಾ ಮಾನದಂಡಗಳ ಬದಲಾವಣೆಯಿಂದಾಗಿ ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಹಾಜರಾಗುವ ಅವಕಾಶವಿದೆ.

 

ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಸುಮಾರು 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅದರಲ್ಲಿ 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿನಿಯರು ಹಾಗೂ 98 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಒಂದು ವೇಳೆ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾದರೆ ಮಾತ್ರ ಪರೀಕ್ಷೆಯ ದಿನಾಂಕವನ್ನು ಮುಂದೂಡುವುದಾಗಿ ಉನ್ನತ ಶಿಕ್ಷಣ ಇಲಾಖೆ ತೀರ್ಮಾನ ಕೈಗೊಂಡಿದೆ.

ಈ ಭಾರಿ ನೀಟ್ ಪರೀಕ್ಷೆಗೆ ವಿದ್ಯಾರ್ಥಿಗಳು ಹೆಚ್ಚು ತಯಾರಾಗದ ಕಾರಣ ಸಿಇಟಿಯತ್ತ ಹೆಚ್ಚು ಒಲವು ತೋರಿದ್ದಾರೆ. ಹಾಗಾಗಿ ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಜೂನ್ 16ರೊಳಗೆ ನೊಂದಣಿಯನ್ನು ಮಾಡಿಕೊಂಡಿರುತ್ತಾರೆ.

ಈ ಭಾರಿ ಕೇವಲ ಸಿಇಟಿ ಅಂಕಗಳ ಆಧಾರದ ಮೇಲೆ ಮಾತ್ರ ರ್ಯಾಂಕ್ ಕೊಡಲಾಗುವುದು. ಅದರ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆಯನ್ನು ಮಾಡಲಾಗುವುದು.

ಎಲ್ಲ ಐಚ್ಛಿಕ ವಿಷಯಗಳ ಪರೀಕ್ಷೆ ಆಗಸ್ಟ್ 28 ಮತ್ತು 29ರಂದು ನಡೆಯಲಿದೆ. ಉಳಿದಂತೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಆಗಸ್ಟ್ 30ರಂದು ಪರೀಕ್ಷೆ ನಡೆಯಲಿದೆ. ಮೊದಲು ಯಾವ ಪದ್ಧತಿಯಲ್ಲಿ ಪರೀಕ್ಷೆ ನಡೆಯುತ್ತಿತ್ತೋ ಅದೇ ರೀತಿ ಪರೀಕ್ಷೆ ನಡೆಯುತ್ತದೆ. ಪ್ರತಿ ವಿಷಯಕ್ಕೆ 60 ಅಂಕ ಇರುತ್ತದೆ. ಮೊದಲ ದಿನ ಗಣಿತ ಮತ್ತು ಜೀವವಿಜ್ಞಾನ ಹಾಗೂ ಎರಡನೇ ದಿನ ಭೌತವಿಜ್ಞಾನ ಮತ್ತು ರಸಾಯನಿಕ ವಿಜ್ಞಾನ ಇರುತ್ತದೆ .

For Quick Alerts
ALLOW NOTIFICATIONS  
For Daily Alerts

English summary
KCET exam 2021 is on august 28, 29 and 30. Mock test for engineering aspirants on august 14 and 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X