Karnataka CET 2021 : ಸಿಇಟಿ ಫಲಿತಾಂಶ 20 ದಿನದೊಳಗೆ ಪ್ರಕಟ : ಸಚಿವ ಅಶ್ವತ್ಥ ನಾರಾಯಣ

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2021 ಇಂದು ಸುಗಮವಾಗಿ ನಡೆದಿದೆ. ಇನ್ನು 20 ದಿನದೊಳಗಾಗಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

 
ಕರ್ನಾಟಕ ಸಿಇಟಿ ಪರೀಕ್ಷೆ ಮೊದಲ ದಿನ ಸುಗಮ : ಉನ್ನತ ಶಿಕ್ಷಣ ಸಚಿವ

ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಇಟಿ ಪರೀಕ್ಷೆಯು ಆಗಸ್ಟ್ 30ರಂದು ಮುಗಿಯಲಿದೆ. ತದನಂತರ ಫಲಿತಾಂಶ ಶೀಘ್ರದಲ್ಲಿ ಪ್ರಕಟಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಿಇಟಿ ಪರೀಕ್ಷೆಯು ಬೆಂಗಳೂರಿನ 86 ಕೇಂದ್ರಗಳು ಸೇರಿದಂತೆ ರಾಜ್ಯದ 530 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಒಟ್ಟಾರೆ ನೋಂದಣಿ ಮಾಡಿಕೊಂಡಿದ್ದ 2,01,834 ಅಭ್ಯರ್ಥಿಗಳಲ್ಲಿ, 1,62,439 (80.48%) ಅಭ್ಯರ್ಥಿಗಳು ಜೀವಶಾಸ್ತ್ರ ವಿಷಯಕ್ಕೆ ಮತ್ತು 1,89,522 (92.90%) ಅಭ್ಯರ್ಥಿಗಳು ಗಣಿತ ವಿಷಯಕ್ಕೆ ಹಾಜರಾಗಿದ್ದರು. ಈ ಪೈಕಿ ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಪರೀಕ್ಷೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಲಾಕ್‌ಡೌನ್ ಮತ್ತು ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದರೂ ಗಡಿ ಪ್ರದೇಶ ಜಿಲ್ಲೆಗಳು ಸೇರಿದಂತೆ ಯಾವುದೇ ಸ್ಥಳದಿಂದ ಯಾವುದೇ ತೊಂದರೆಗಳು ಆಗಿಲ್ಲ. ಪ್ರಮುಖವಾಗಿ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷೆಗಳು ಸುಗಮವಾಗಿ ನಡೆದಿದೆ ಎಂದಿದ್ದಾರೆ.

ಸಿಇಟಿ ಪರೀಕ್ಷೆಯ ಮೊದಲ ದಿನವಾದ ಇಂದು ಜೀವಶಾಸ್ತ್ರ ಮತ್ತು ಗಣಿತ ವಿಷಯಗಳ ಪರೀಕ್ಷೆಯು ಬೆಳಿಗ್ಗೆ 10:30 ರಿಂದ 11:50ರ ವರೆಗೆ ಮತ್ತು ಮಧ್ಯಾಹ್ನ 2:30 ರಿಂದ 3:50 ರವರೆಗೆ ನಡೆದಿದೆ. ನಾಳೆ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ. ಆಗಸ್ಟ್ ೩೦ರಂದು ಗಡಿನಾಡು ಮತ್ತು ಹೊರನಾಡು ಕನ್ನಡಿಗರಿಗೆ ಭಾಷಾ ಪರೀಕ್ಷೆ ನಡೆಯಲಿದೆ.

 

ಸಿಇಟಿ ಪರೀಕ್ಷೆಗೆ ಒಟ್ಟು 530 ವೀಕ್ಷಕರು, 1,060 ವಿಶೇಷ ನಿಗಾ ದಳದ ಸದಸ್ಯರು, 530 ಉಸ್ತುವಾರಿಗಳು, ಸುಮಾರು 8,409 ಇನ್‌ವಿಜಿಲೇಟರ್‌ಗಳು ಮತ್ತು 20,415 ಅಧಿಕಾರಿಗಳನ್ನು ಪರೀಕ್ಷಾ ಕರ್ತವ್ಯಗಳನ್ನು ನಿರ್ವಹಿಸಲು ನಿಯೋಜಿಸಲಾಗಿದೆ. ಇನ್ನೂ ಎರಡು ದಿನ ಪರೀಕ್ಷೆಗಳು ನಡೆಯಲಿದ್ದು ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಇಲ್ಲಿ ನೀಡಲಾಗಿದೆ.

ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪಾಲಿಸಬೇಕಾದ ಮಾರ್ಗಸೂಚಿಗಳು :

* ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು
* ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
* ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕನಿಷ್ಠ 2 ಗಂಟೆಗಳ ಮೊದಲು ಪರೀಕ್ಷಾ ಕೇಂದ್ರವನ್ನು ತಲುಪಬೇಕು. ಪರೀಕ್ಷಾ ಸಮಯವನ್ನು ಕೆಸಿಇಟಿ ಪ್ರವೇಶ ಪತ್ರ 2021 ರಲ್ಲಿ ಉಲ್ಲೇಖಿಸಲಾಗಿದೆ.
* ಓಎಂಆರ್ ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಗಳು ತಮ್ಮ ಹೆಸರನ್ನು ಬರೆಯಬೇಕು.
* ಸಿಇಟಿ ಸಂಖ್ಯೆಯನ್ನು ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಬರೆದು ಅದಕ್ಕೆ ಸಂಬಂಧಿಸಿದ ವೃತ್ತಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು.
* ಓಎಂಆರ್ ಉತ್ತರ ಪತ್ರಿಕೆಯಲ್ಲಿ ಮುದ್ರಿತವಾಗಿರುವ ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆಯಲ್ಲಿರುವ ಕ್ರಮ ಸಂಖ್ಯೆ ಒಂದೇ ಆಗಿರುವುದನ್ನು ಖಚಿತಪಡಿಸಿಕೊಳ್ಳಿ.
* ವಿದ್ಯಾರ್ಥಿಗಳು ಉತ್ತರಗಳನ್ನು ಓಎಂಆರ್ ಉತ್ತರ ಪತ್ರಿಕೆಯಲ್ಲಿ ಶೇಡ್ ಮಾಡುವುದರ ಮೂಲಕ ಉತ್ತರಿಸಬೇಕು.
* ವಿದ್ಯಾರ್ಥಿಗಳು ಪರೀಕ್ಷೆಗೆ Blue/ Black ಬಾಲ್ ಪಾಯಿಂಟ್ ಪೆನ್ನನ್ನು ತೆಗೆದುಕೊಂಡು ಹೋಗಬೇಕು.
* ವಿದ್ಯಾರ್ಥಿಗಳು ಪರೀಕ್ಷೆಯ ಮೊದಲನೇ ಬೆಲ್ ಆಗುವ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಬೇಕು.
* ಮೂರನೇ ಬೆಲ್ ಬಾರಿಸಿದ ನಂತರ ಯಾವುದೇ ವಿದ್ಯಾರ್ಥಿಗೆ ಕೆಸಿಇಟಿ 2021 ಪರೀಕ್ಷಾ ಹಾಲ್ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
* ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಪ್ರವೇಶ ಪತ್ರದ ಜೊತೆಗೆ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು.
* ವಿದ್ಯಾರ್ಥಿಗಳು ಓ.ಎಂ.ಆರ್. ಉತ್ತರ ಹಾಳೆಯಲ್ಲಿ ಎಡಗೈ ಹೆಬ್ಬೆರಳ ಗುರುತನ್ನು ಹಾಕುವಂತಿಲ್ಲ.
* ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆಮೊಬೈಲ್, ಕೈಗಡಿಯಾರ, ಟ್ಯಾಬ್ಲೆಟ್ ಕೊಂಡೊಯ್ಯುವಂತಿಲ್ಲ.

ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಬಹುದು.

For Quick Alerts
ALLOW NOTIFICATIONS  
For Daily Alerts

English summary
Karnataka CET exam 2021 results will be announced in 20 days said by higher education minister Dr. C.N ashwath narayana.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X