Launch Of Scholarship Programme : ಕಾರ್ಯಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಆಹ್ವಾನಿಸಿದ ಬೊಮ್ಮಾಯಿ

ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಚರ್ಚಿಸಿದ್ದಾರೆ ಜೊತೆಗೆ ರಾಜ್ಯದ ರೈತರ ಮಕ್ಕಳಿಗಾಗಿ ವಿದ್ಯಾರ್ಥಿವೇತನ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಿದ್ದಾರೆ.

ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಆಹ್ವಾನ : ಸಿಎಂ ಬೊಮ್ಮಾಮಿ

ಸಿಎಂ ಬೊಮ್ಮಾಯಿ ಅವರು ಜುಲೈ 28ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವಿಕರಿಸಿದ ಬಳಿಕ ರಾಜ್ಯದ ಜನತೆಗೆ ಹಲವು ಬಂಪರ್ ಘೋಷಣೆಗಳನ್ನು ಮಾಡಿದ್ದರು. ಅದರಲ್ಲಿ ರೈತರ ಮಕ್ಕಳಿಗೆ ಹೊಸ ವಿದ್ಯಾರ್ಥಿವೇತನ ಯೋಜನೆಯನ್ನು ಜಾರಿಗೊಳಿಸುವುದಾಗಿ ಅವರು ಹೇಳಿದ್ದರು. ರೈತರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗದಿರಲು ಹಾಗೂ ಶಿಕ್ಷಣ ಸಾಲವನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿವರ್ಷ 1,000 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಅವರು ತಿಳಿಸಿದ್ದರು. ಇದೀಗ ವಿದ್ಯಾರ್ಥಿವೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ಉದ್ಘಾಟನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮುಖ್ಯಮಂತ್ರಿಗಳು ಕೇಂದ್ರ ಕೃಷಿ ಸಚಿವ ತೋಮರ್ ಅವರನ್ನು ಭೇಟಿ ಮಾಡಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಿದಲ್ಲದೇ ವಿದ್ಯಾರ್ಥಿವೇತನ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳೊಬ್ಬರು ಹೇಳಿದ್ದಾರೆ. ಅದಾಗ್ಯೂ ಅವರೊಂದಿಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಯತ್ನಗಳ ಕುರಿತು ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka chief minister basavaraj s bommai invited union agriculture minster narendra singh tomar to scholarship launch programmed for childrens of the farmers.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X