Karnataka College Teachers Transfer Procedure : ಜುಲೈ 16ರಂದು ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಕಾಲೇಜು ಪ್ರಾಧ್ಯಾಪಕರ ವರ್ಗಾವಣೆ ಪ್ರಕ್ರಿಯೆ ಆರಂಭ

ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಧ್ಯಾಪಕರ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯು ಜು.16ರಂದು ಪ್ರಕಟವಾಗಲಿದ್ದು, ಜು.27 ರಿಂದ 3 ದಿನಗಳ ಕಾಲ ಸಾಮಾನ್ಯ ಕೌನ್ಸೆಲಿಂಗ್ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

 
ಕಾಲೇಜು ಪ್ರಾಧ್ಯಾಪಕರ ವರ್ಗಾವಣೆ ಪ್ರಕ್ರಿಯೆ ಆರಂಭ

ಈ ಕುರಿತು ಮಾತನಾಡಿರುವ ಅವರು ವರ್ಗಾವಣೆ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿರುತ್ತದೆ. ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಸರ್ಕಾರ ಇಡೀ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಿದೆ ಎಂದು ತಿಳಿಸಿದ್ದಾರೆ.

ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲು ಜುಲೈ 14 ಕೊನೆಯವಾಗಿದ್ದು, ಜುಲೈ 16ರಂದು ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗುವುದು. ಜುಲೈ 20ರಂದು ವಿಶೇಷ ಪ್ರಕರಣಗಳ ಆದ್ಯತಾ ಪಟ್ಟಿ ಪ್ರಕಟವಾಗಲಿದೆ. ಜುಲೈ 22ರಂದು ವಿಶೇಷ ಪ್ರಕರಣಗಳ ವರ್ಗಾವಣೆ ಕೌನ್ಸಿಲಿಂಗ್ ಹಾಗೂ 27 ರಿಂದ 29ರವರೆಗೆ ಅಂದರೆ ೩ ದಿನಗಳ ಕಾಲ ಸಾಮಾನ್ಯ ಅಭ್ಯರ್ಥಿಗಳ ಕೌನ್ಸಿಲಿಂಗ್‌ ಪ್ರಕ್ರಿಯೆ ನಡೆಯಲಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಐದು ವಲಯಗಳಲ್ಲಿ ವಿಂಗಡಿಸಿ ವಲಯಮುಕ್ತ ವರ್ಗಾವಣೆಗೆ ಅವಕಾಶ ಮಾಡಲಾಗಿದೆ. ಬೆಂಗಳೂರು ಮಹಾನಗರ-ವಲಯ ಎ, ಎಲ್ಲಾ ಮಹಾನಗರ ಪಾಲಿಕೆಗಳನ್ನು ಹೊಂದಿರುವ ನಗರಗಳು (ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ, ಕಲಬುರಗಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು)-ವಲಯ ಬಿ, ಜಿಲ್ಲಾ ಕೇಂದ್ರಗಳು ಹಾಗೂ ನಗರಸಭೆಗಳನ್ನು ಹೊಂದಿರುವ ನಗರಗಳು-ವಲಯ ಸಿ, ಎಲ್ಲಾ ತಾಲೂಕು ಕೇಂದ್ರಗಳು ಹಾಗೂ ಪುರಸಭೆಗಳನ್ನು ಹೊಂದಿರುವ ಪಟ್ಟಣಗಳು-ವಲಯ ಡಿ ಹಾಗೂ ಉಳಿದ ಎಲ್ಲಾ ಪ್ರದೇಶಗಳು-ವಲಯ ಇ ಎಂದು ವಿಂಗಡಿಸಲಾಗಿದೆ.

ಈಗ ರೂಪಿಸಿರುವ ನಿಯಮಗಳಲ್ಲಿ ಬೋಧಕರ ಕಡ್ಡಾಯ ವರ್ಗಾವಣೆ ಪ್ರಮುಖವಾಗಿದೆ. ಒಟ್ಟು ಬೋಧಕ ಹುದ್ದೆಗಳ ಪೈಕಿ ಶೇ.15ರಷ್ಟು ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಅದರಲ್ಲಿ ಶೇ.9ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ ಹಾಗೂ ಶೇ.6ರಷ್ಟು ವಿಶೇಷ ಪ್ರಕರಣಗಳಿಗೆ ಅಂದರೆ; ವಿಕಲಚೇತನರು, ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವವರು, ವಿಧವೆಯರು, ಏಕ ಪೋಷಕರು, ವಿಚ್ಛೇಧಿತ ಮಹಿಳೆಯರು, ಪತಿ-ಪತ್ನಿ ಪ್ರಕರಣಗಳಿಗೆ ವಿಶೇಷ ಅವಕಾಶ ನಿಗದಿಪಡಿಸಲಾಗಿದೆ. ಅಲ್ಲದೆ, ಕೌನ್ಸೆಲಿಂಗ್‌ನಲ್ಲೂ ಇವರಿಗೆ ಆದ್ಯತೆ ನೀಡಲಾಗುವುದು.

ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದ ಹಾಗೂ ಉಳಿಕೆ ರಾಜ್ಯ ವೃಂದದ ಬೋಧಕರ ಪ್ರತ್ಯೇಕ ವಲಯವಾರು ಪಟ್ಟಿಗಳನ್ನು ಪ್ರಕಟಿಸಿ, ಪಟ್ಟಿಗೆ ಸಂಬಂಧಿಸಿದಂತೆ ಬೋಧಕರಿಂದ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯವಿದ್ದಲ್ಲಿ ಆದ್ಯತಾ ಪಟ್ಟಿಯನ್ನು ಪರಿಷ್ಕರಿಸಿ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸಲಾಗುತ್ತದೆ.

For Quick Alerts
ALLOW NOTIFICATIONS  
For Daily Alerts

English summary
The transfer process of Karnataka college professors will commence and a temporary list of common candidates will be announced on July 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X