ಡಿಪ್ಲೋಮ ಅಭ್ಯರ್ಥಿಗಳಿಗೆ 2020ನೇ ಸಾಲಿನ ಎರಡನೇ ವರ್ಷದ/ ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಾತಿ ಡಿಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಂದು ಅವಕಾಶ ನೀಡಿದೆ.
ಪರೀಕ್ಷೆಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದ್ದು, ಜುಲೈ 9,2020 ರ ಸಂಜೆ 06-30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ಜುಲೈ 10,2020 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿರುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು ಆದರೆ ಇಲ್ಲಿಯವರೆಗೆ ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳೂ ಸಹ ಶುಲ್ಕವನ್ನು ಪಾವತಿಸಬಹುದು.
ರಾಜ್ಯದಲ್ಲಿ ಕೊರೋನಾ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಈಗಾಗಲೇ ಪ್ರಕಟಿಸಿದ ಕೇಂದ್ರಗಳ ಜೊತೆ ಹೆಚ್ಚುವರಿಯಾಗಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಿ ಆಯ್ಕೆ ಮಾಡಿಕೊಳ್ಳಬಹುದು. ಮತ್ತು ಈ ಮೊದಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯವಿದ್ದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಜೊತೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆಯ ಬಗ್ಗೆ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ