ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಪ್ಲೋಮಾ ಸಿಇಟಿ 2020 ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
2020ನೇ ಸಾಲಿನ ಎರಡನೇ ವರ್ಷದ ಮೂರನೇ ಸೆಮಿಸ್ಟರ್ ಲ್ಯಾಟರಲ್ ಎಂಜಿನಿಯರಿಂಗ್ ಪ್ರವೇಶಾತಿಗಾಗಿ ನಡೆಸಿದ್ದ ಡಿಪ್ಲೋಮಾ ಸಿಇಟಿ 2020 ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ.
ಡಿಪ್ಲೋಮಾ ಸಿಇಟಿ 2020 ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಡಿಸಿಇಟಿ 2020 ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಂತರ ಸ್ಕ್ರೀನ್ ಮೇಲೆ ಫಲಿತಾಂಶ ಲಭ್ಯವಾಗುವುದು
ಸ್ಟೆಪ್ 5: ಫಲಿತಾಂಶ ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಬಹುದು.
ದಾಖಲೆ ಪರಿಶೀಲನೆಯ ವೇಳಾಪಟ್ಟಿಯನ್ನು ಕೆಇಎ ಪ್ರಕಟ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Daily Alerts