Degree College Admission 2021 : ನಾಳೆ ಇಂದ ಪ್ರಾರಂಭವಾಗಬೇಕಿದ್ದ ಪದವಿ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ

ಕೊರೋನಾ ಹಿನ್ನೆಲೆ ಪದವಿ ಕಾಲೇಜು ಪ್ರವೇಶ ಪ್ರಕ್ರಿಯೆ ಮುಂದೂಡಿಕೆ

ಕಾಲೇಜು ಶಿಕ್ಷಣ ಇಲಾಖೆ ರಾಜ್ಯದಲ್ಲಿ 2021-22ನೇ ಸಾಲಿನ ಪದವಿ ಕಾಲೇಜುಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಮುಂದೂಡಲು ಆದೇಶ ಹೊರಡಿಸಿದೆ‌‌.

ರಾಜ್ಯದಲ್ಲಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ತೇರ್ಗಡೆ ಮಾಡಲಾಗಿದೆ. ಫಲಿತಾಂಶದಿಂದ ತೃಪ್ತಿಯಾಗದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನು ಆಗಸ್ಟ್ ೧೯ರಂದು ನಡೆಸಲಾಗುತ್ತಿದೆ. ಒಟ್ಟು 878 ವಿದ್ಯಾರ್ಥಿಗಳು ಮರುಪರೀಕ್ಷೆಗೆ ಹಾಜರಾಗಲಿದ್ದಾರೆ. ಇದೀಗ ಪದವಿ ಕಾಲೇಜು ಪ್ರವೇಶ ಪ್ರಕ್ರಿಯೆಯನ್ನು ಮುಂದೂಡುವಂತೆ ಇಲಾಖೆ ಪ್ರಕಟಣೆ ಹೊರಡಿಸಿದೆ.

ಪ್ರಕಟಣೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಯನ್ನು ಆಗಸ್ಟ್ 4,2021ರಿಂದೆ ಕೈಗೊಳ್ಳಲು ಸೂಚಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 2021-22ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಸೂಚಿಸಲಾಗಿದೆ ಹಾಗೂ ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ತಿಳಿಸಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka degree colleges admission 2021 process are postponed which were scheduled on August 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X