ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್

ಪದವಿ ವಿದ್ಯಾರ್ಥಿಗಳು ಈ ಬಾರಿಯ ಸೆಮಿಸ್ಟರ್ ಪರೀಕ್ಷೆ ಬರೆಯಲು ಇಚ್ಚಿಸದಿದ್ದಲ್ಲಿ ಮುಂದಿನ ವರ್ಷಕ್ಕೆ ಕ್ಯಾರಿ ಓವರ್ ಮಾಡಿಕೊಳ್ಳಲು ಅವಕಾಶ ನೀಡುತ್ತೇವೆ. ಇದನ್ನು ಅಟೆಂಪ್ಟ್ ಎಂದು ಪರಿಗಣಿಸಲಾಗುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದ್ದಾರೆ.

 

ಪದವಿ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ಸೋಂಕು ಹೆಚ್ಚುತ್ತಿರುವ ಸಮಯದಲ್ಲಿ ಆನ್‌ಲೈನ್‌ ತರಗತಿಗಳು ಬೇಡ ಎಂದು ವಿದ್ಯಾರ್ಥಿಗಳು ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ತರಗತಿಗಳನ್ನು ನಡೆಸುವ ಬಗ್ಗೆ ಅಧಿಕಾರಿಗಳು ಮತ್ತು ವಿವಿಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶಾಲಾ-ಕಾಲೇಜು ಆರಂಭ ಯಾವಾಗ?:

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಲೇ ಇದೆ. ಈ ನಡುವೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಶಾಲೆಗಳನ್ನು ಹಂತ ಹಂತವಾಗಿ ತೆರೆಯಲು ಸೂಚನೆ ನೀಡಲಾಗಿತ್ತು. ಜೂನ್‌ 08 ರಿಂದ ದಾಖಲಾತಿ ಆರಂಭಿಸಲು ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಲಾಗಿತ್ತು. ಈ ಕುರಿತು ಪೋಷಕರು ಹಾಗೂ ಶಾಲಾ ಶಿಕ್ಷಕರು ಶಾಲೆಗಳ ಆರಂಭಕ್ಕೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈಗಲೇ ಶಾಲೆ ತೆರೆಯುವುದು ಬೇಡ ಮತ್ತು ಕೊರೊನಾ ವೈರಸ್ ಹರಡುವಿಕೆ ಚೇತರಿಕೆ ಕಂಡಮೇಲೆ ಶಾಲೆಗಳನ್ನು ಆರಂಭಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಆದ್ದರಿಂದ ಶಾಲೆ ಮತ್ತು ಕಾಲೇಜುಗಳ ಆರಂಭ ದಿನಾಂಕ ಇನ್ನೂ ನಿಗಧಿಯಾಗಿಲ್ಲ.

For Quick Alerts
ALLOW NOTIFICATIONS  
For Daily Alerts

English summary
Karnataka degree Students can carry over semester exam to next year said by minister C,N Ashwath narayan.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X