New Academic Year 2021: ಜುಲೈ 1 ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ ; ಆಫ್‌ಲೈನ್ ಆಫ್‌ಲೈನ್ ತರಗತಿಗೆ ಮಾರ್ಗಸೂಚಿ ಪ್ರಕಟ

ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭ, ಆನ್‌ಲೈನ್ ಆಫ್‌ಲೈನ್ ತರಗತಿಗೆ ಮಾರ್ಗಸೂಚಿ ಪ್ರಕಟ

2021-22ನೇ ಸಾಲಿನ ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷದ ತಯಾರಿ ಆರಂಭಿಸಲು ಸೂಚನೆ ನೀಡಲಾಗಿದ್ದು, ಜುಲೈ ಒಂದರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಭೌತಿಕ ತರಗತಿ ಬದಲು ಆನ್'ಲೈನ್ ಮತ್ತು ಆಫ್'ಲೈನ್ ನಲ್ಲಿ ಪಠ್ಯ ಬೋಧನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ದೂರದರ್ಶನದ ಚಂದನ ವಾಹಿನಿಯಲ್ಲಿ ಸಂವೇದಾ ಕಾರ್ಯಕ್ರಮದ ಮೂಲಕ 1662 ವಿಡಿಯೋ ಪಾಠ ಬೋಧನಾ ನಡೆಯಲಿದೆ. ಎಫ್‌ಎಂ ರೇಡಿಯೋದಲ್ಲಿ ಆಡಿಯೋ ಪಾಠಗಳ ಪ್ರಸಾರ ನಡೆಯಲಿದೆ. ಈಗಾಗಲೇ ಕೇಂದ್ರ ಸರ್ಕಾರದ ದೀಕ್ಷಾ ಆ್ಯಪ್ ನಲ್ಲಿ 1 ರಿಂದ 10ನೇ ತರಗತಿ ಮಕ್ಕಳ ಪಠ್ಯಕ್ಕೆ ಸಂಬಂಧಿಸಿದಂತೆ 22 ಸಾವಿರಕ್ಕೂ ಹೆಚ್ಚು ಕಂಟೆಂಟ್ ಗಳನ್ನು ಅಪ್ ಲೋಡ್ ಮಾಡಲಾಗಿದೆ. ಈ ಆ್ಯಪ್ ನಲ್ಲಿ ಮೌಲ್ಯವರ್ಧಿತ ಪಠ್ಯಪುಸ್ತಕಗಳೂ ದೊರೆಯಲಿವೆ. ಅವುಗಳೆಲ್ಲವನ್ನೂ ಡೌನ್ ಲೋಡ್ ಮಾಡಿಕೊಂಡು ಪಾಠ ಅಭ್ಯಾಸ ಮಾಡಬಹುದಾಗಿದೆ.

ತರಗತಿವಾರು ಮಕ್ಕಳ ಪೋಷಕರ ವಾಟ್ಸ್ ಆ್ಯಪ್ ಗುಂಪುಗಳನ್ನು ಮಾಡಿ ಅವರನ್ನು ನಿಗದಿತವಾಗಿ ಸಂಪರ್ಕಿಸಿ ಮಕ್ಕಳ ಕಲಿಕೆಗೆ ಅಗತ್ಯ ಮಾರ್ಗದರ್ಶನ ನೀಡಬೇಕು. ದೂರದರ್ಶನ ರೇಡಿಯೋ ಪಾಠ ಬೋಧನಾ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಸಂಪರ್ಕಿಸಿ ಮೊಬೈಲ್ ಫೋನ್, ಇಂಟರ್ನೆಟ್, ರೇಡಿಯೋ ದೂರದರ್ಶನ ಸೇರಿದಂತೆ ಇತರೆ ತಾಂತ್ರಿಕ ಸೌಲಭ್ಯ ಮಾಹಿತಿ ಪಡೆದು, ಅವುಗಳ ಮೂಲಕ ಶಿಕ್ಷಣ ಪಡೆಯಲು ಸಹಾಯಕ ಮಾಡಬೇಕು. ಒಂದು ವೇಳೆ ಯಾವುದೇ ತಾಂತ್ರಿಕ ಸೌಲಭ್ಯವಿಲ್ಲದ ವಿದ್ಯಾರ್ಥಿಗಳ ಮನೆಯ ಸಮೀಪದ ಸಹೃದಯಿ ವ್ಯಕ್ತಿಗಳನ್ನು ಗುರ್ತಿಸಿ ಅವರ ಬಳಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಳ್ಳಲು ಸಹಾಯವಾಗುವಂತೆ ಶಿಕ್ಷಕರು ಮನವೊಲಿಸುವಂತೆಯೂ ಶಿಕ್ಷಕರಿಗೆ ಇಲಾಖೆ ಸೂಚಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka education department released guidelines for online Offline Classes and academic year will begins from july 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X