ಸಿಇಟಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದಿನಿಂದ ಜೂನ್ 29ರ ಸಂಜೆ 6 ಗಂಟೆಯ ವರೆಗೆ ಅವಕಾಶ ನೀಡಿದೆ.

ಸಿಇಟಿ 2020 ಪರೀಕ್ಷೆ ಇದೇ ಜುಲೈ 30 ಮತ್ತು 31ರಂದು ನಡೆಯಲಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಹೊರನಾಡು ಮತ್ತು ಗಡಿನಾಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಬಹುದು ಹಾಗೂ ಅರ್ಜಿಯಲ್ಲಿನ ಮಾಹಿತಿಯನ್ನು ಬದಲಾಯಿಸಿಕೊಳ್ಳಲು ಕೊನೆಯ ಅವಕಾಶ ನೀಡಲಾಗಿದೆ.
ಈ ಮೊದಲು ಬೆಂಗಳೂರು ಕೇಂದ್ರದಲ್ಲಿ ಮಾತ್ರ ಸಿಇಟಿ ಮತ್ತು ಕನ್ನಡ ಭಾಷೆ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಲಾಗಿತ್ತು. ಆದರೆ ಕೊರೋನಾ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳ ಮನವಿಯ ಮೇರೆಗೆ ಹೊಸ ಪರೀಕ್ಷಾ ಕೇಂದ್ರವಾಗಿ ರಬಕವಿ ಬನಹಟ್ಟಿ ತಾಲೂಕು ಸೇರ್ಪಡೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಇಲಾಖೆ ತಿಳಿಸಿದೆ.
ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ. ಅಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಸ್ಥಳಗಳನ್ನು ಗಮನಿಸಿ ಪರೀಕ್ಷಾ ಕೇಂದ್ರ ಬದಲಾಯಿಸಿಕೊಳ್ಳಬಹುದು.
ಅಭ್ಯರ್ಥಿಗಳು ಈ ಬಗ್ಗೆ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











