ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 'ಸಿಇಟಿ' ಆ್ಯಪ್‍

ಸಿಇಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ವಿಶೇಷ ಆ್ಯಪ್‍ ತರಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ.

 

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಸಂಬಂಧಿಸಿದಂತೆ ಮಾಹಿತಿಗಳನ್ನು ಈ ಆ್ಯಪ್‍ ಒಳಗೊಂಡಿದ್ದು, ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಅರ್ಜಿ ಪ್ರಕ್ರಿಯೆ ಬಗ್ಗೆ ಪೂರ್ಣ ಮಾಹಿತಿ ಇರಲಿದೆ.

ವೃತ್ತಿಪರ ಕೋರ್ಸ್ ಪ್ರವೇಶ: ಆನ್ಲೈನ್ ಮೂಲಕ ದಾಖಲೆ ಪರಿಶೀಲನೆಗೆ ಚಿಂತನೆ

ಸಿಇಟಿ ಆ್ಯಪ್‍

ಪ್ರತಿ ವರ್ಷ ಇಂಜಿನಿಯರಿಂಗ್ ಸೇರಿದಂತೆ ಇನ್ನಿತರೆ ಕೋರ್ಸುಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗುವ ಸಂದರ್ಭದಲ್ಲಿ ಪ್ರಾಧಿಕಾರ ತನ್ನ ವೆಬ್ಸೈಟ್ ನಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರೂ ಆನ್-ಲೈನ್ ಅರ್ಜಿಗಳನ್ನು ಭರ್ತಿ ಮಾಡುವಾಗ ಸಾಕಷ್ಟು ಲೋಪಗಳು ಕಂಡುಬರುತ್ತಿವೆ. ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಪ್ಪು ಸರಿಪಡಿಸಿಕೊಳ್ಳಲು ಇನ್ನಿಲ್ಲದ ಪಡಿಪಾಟಲು ಪಡುವಂತಾಗಿದೆ.

 

ಈ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೌಲಭ್ಯ ಹೊಂದಿರುವ ಮೊಬೈಲ್ ನಲ್ಲೇ ಮಾಹಿತಿ ಅಪ್ಲೋಡ್ ಮಾಡುವಂತಹ ಹೊಸ ಆ್ಯಪ್‍ ಅಭಿವೃದ್ಧಿಪಡಿಸಲು ಕರ್ನಾಟಕ ಪ್ರಾಧಿಕಾರ, ನ್ಯಾಷನಲ್ ಇನ್ಫಾರ್ಮೇಟಿಕ್ಸ್ ಸೆಂಟರ್ (ಎನ್ಐಸಿ) ಅನ್ನು ಕೋರಿದೆ. ಮಾರ್ಚ್ ವೇಳೆಗೆ ಆ್ಯಪ್‍ ಸಿದ್ಧಗೊಳ್ಳುವ ಸಾಧ್ಯತೆ ಇದೆ ಎಂದು ಕೆಇಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಆನ್-ಲೈನ್ ನಲ್ಲಿ ಸಿಇಟಿಗೆ ಅರ್ಜಿ ಸಲ್ಲಿಸುವಾಗ ಹೆಚ್ಚು ಸೈಬರ್ ಸೆಂಟರ್ ಗಳನ್ನೇ ಅವಲಂಬಿಸುತ್ತಾರೆ. ಎಲ್ಲ ವಿದ್ಯಾರ್ಥಿಗಳ ಅರ್ಜಿಗಳನ್ನು ಸಂಗ್ರಹಿಸಿಕೊಳ್ಳುವ ಸಿಬ್ಬಂದಿ ಏಕಕಾಲದಲ್ಲಿ ಅಪ್ಲೋಡ್ ಮಾಡುತ್ತಾರೆ. ಇಂತಹ ಸನ್ನಿವೇಶದಲ್ಲಿ ಫೋಟೋ ಅದಲು ಬದಲಾಗುವುದು, ಜಾತಿ ತಪ್ಪಾಗಿ ನಮೂದಿಸುವುದು ಮತ್ತು ಇತರೆ ಮಾಹಿತಿಗಳು ತಪ್ಪಾಗುವುದು ಸಾಮಾನ್ಯ. ಆ್ಯಪ್‍ ಬಳಸುವುದರಿಂದ ಇದನ್ನು ತಡೆಗಟ್ಟಬಹುದು.

ಆ್ಯಪ್‍ ಮೂಲಕ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲೇ ಮಾಹಿತಿಯನ್ನು ಪರಿಶೀಲಿಸಬಹುದು. ಒಂದುವೇಳೆ ಏನಾದರು ತಪ್ಪುಗಳಾಗಿದ್ದರೆ ಅದನ್ನು ಅಲ್ಲೇ ತಿದ್ದುವ ಅವಕಾಶ ಕೂಡ ಇರಲಿದೆ. ಇನ್ನು ಸೀಟು ಹಂಚಿಕೆ, ಶುಲ್ಕ ಪಾವತಿ, ಪ್ರವೇಶಾತಿ ವಿವರಗಳನ್ನು ಕೂಡ ಮೊಬೈಲ್ ಮೂಲಕವೇ ಪಡೆಯಬಹುದಾಗಿದೆ.

ಇದರಿಂದ ವಿದ್ಯಾರ್ಥಿಗಳಿಗೆ ಸೈಬರ್ ಸೆಂಟರ್ ಗಳಿಗೆ ಹೋಗುವುದು ತಪ್ಪುತ್ತದೆ. ಅಲ್ಲದೇ ಪ್ರಾಧಿಕಾರದ ಸಿಬ್ಬಂದಿಗೂ ಹೊರೆ ಕಡಿಮೆಯಾಗಲಿದೆ.

ಪ್ರಾಧಿಕಾರದ ಪ್ರತಿಯೊಂದು ಮಾಹಿತಿಯನ್ನು ವಿದ್ಯಾರ್ಥಿಗಳು ಎಲ್ಲಿ ಬೇಕಾದರು ಯಾವ ಕ್ಷಣದಲ್ಲಿ ಬೇಕಾದರು ಪಡೆಯಬಹುದಾಗಿದೆ. ಕೆಲವೊಮ್ಮೆ ರಾತ್ರೋರಾತ್ರಿ ಸೀಟು ಹಂಚಿಕೆ ಪ್ರಕ್ರಿಯೆ ನಡೆಸುವುದರಿಂದ ಕ್ಷಣ ಕ್ಷಣದ ಮಾಹಿತಿಯನ್ನು ಬೆರಳ ತುದಿಯಲ್ಲೆ ಪಡೆಯುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಕೆಇಎ ಅಧಿಕಾರಿಗಳು ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
The Karnataka Examination Authority has decided to bring a special app to facilitate CET students. This app includes information regarding the Common Entrance Examination (CET) and full information about the application process and seat allotment.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X