Karnataka PU Colleges Start : ರಾಜ್ಯದಲ್ಲಿ ಜೂನ್ 9 ರಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭ

2022-23ನೇ ಸಾಲಿನ ಕರ್ನಾಟಕ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಜೂನ್ 9 ರಿಂದ ಆರಂಭವಾಗಲಿವೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ತರಗತಿಗಳ ಆರಂಭಕ್ಕೆ ಇಲಾಖೆಯು ಈಗಾಲೇ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದು, ಜೂನ್ 9 ರಿಂದ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬಹುದು.

ಜೂನ್ 9ರಿಂದ ಪಿಯುಸಿ ತರಗತಿಗಳು ಆರಂಭ

ಶೈಕ್ಷಣಿಕ ವರ್ಷದ ಮೊದಲ ಅವಧಿಯು ಜೂನ್‌ 9 ರಿಂದ ಸೆಪ್ಟೆಂಬರ್‌ 30ರ ವರೆಗೆ ನಡೆಯಲಿದೆ. ಎರಡನೇ ಅವಧಿಯು ಅಕ್ಟೋಬರ್‌ 13 ರಿಂದ 2023ರ ಮಾರ್ಚ್‌ 31ರವರೆಗೆ ನಿಗದಿಪಡಿಸಲಾಗಿದೆ. ಅಕ್ಟೋಬರ್‌ 1 ರಿಂದ 12 ರವರೆಗೆ ಮಧ್ಯಂತರ ರಜೆ ಇರಲಿದೆ. ಏಪ್ರಿಲ್ 1 ರಿಂದ ಬೇಸಿಗೆ ರಜೆ ಆರಂಭವಾಗಲಿದೆ.

ಜೂನ್ 9ರಿಂದ ಪಿಯುಸಿ ತರಗತಿಗಳು ಆರಂಭ

ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಮೇ 19ರಂದು ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಈಗಾಗಲೇ ಪಿಯುಸಿ ಪ್ರವೇಶಾತಿಗೆ ಮುಂದಾಗಿದ್ದಾರೆ. ಅಲ್ಲದೆ ಕಳೆದೆರಡು ವರ್ಷಗಳು ಕೋವಿಡ್ ಹಿನ್ನೆಲೆಯಲ್ಲಿ ತರಗತಿಗಳು ನಿಗದಿತ ಅವಧಿಯಲ್ಲಿ ನಡೆದಿರುವುದಿಲ್ಲ ಹಾಗಾಗಿ ಇಲಾಖೆಯು ಸೂಕ್ತ ಮಾರ್ಗಸೂಚಿಯೊಂದಿಗೆ ಹಿಂದಿನಂತೆಯೇ ನಿಗದಿತ ಅವಧಿಯಲ್ಲಿ ತರಗತಿಗಳನ್ನು ನಡೆಸಲು ಸಜ್ಜಾಗಿದೆ. ಅದಾಗ್ಯೂ ವಿದ್ಯಾರ್ಥಿಗಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಮುಂಜಾಗ್ರತಾ ಕ್ರಮಗಳೊಂದಿಗೆ ತರಗತಿಗಳನ್ನು ಆರಂಭಿಸಲು ಇಲಾಖೆಯು ಮುಂದಾಗಿದೆ.

ಎಸ್‌ಎಸ್‌ಎಲ್‌ಸಿ ನಂತರ ಪಿಯು ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಹಿಜಾಬ್‌ ವಿವಾದದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪಿನ ಅನ್ವಯ ಸಮವಸ್ತ್ರಗಳನ್ನು ಧರಿಸುವಂತೆ ಸೂಚಿಸಿ, ಪದವಿ ಪೂರ್ಣ ಶಿಕ್ಷಣ ಇಲಾಖೆಯು 2022-23ನೇ ಶೈಕ್ಷಣಿಕೆ ವರ್ಷದ ದಾಖಲಾತಿ ಮಾರ್ಗಸೂಚಿ ಪ್ರಕಟಿಸಿತ್ತು.

For Quick Alerts
ALLOW NOTIFICATIONS  
For Daily Alerts

English summary
Karnataka starts classes for first and second puc students from june 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X