Karnataka 1st PUC Admission : ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ ; ಸಚಿವ ಬಿ.ಸಿ ನಾಗೇಶ್

ಪ್ರಸಕ್ತ ಸಾಲಿನಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಪ್ರಥಮ ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ

ಈ ಕುರಿತು ಟ್ವಿಟ್ಟರ್ ನಲ್ಲಿ "ಸಿಬಿಎಸ್‌ಸಿ ಹಾಗೂ ಐಸಿಎಸ್‌ಸಿ 10ನೇ‌ ತರಗತಿ ಫಲಿತಾಂಶ ಪ್ರಕಟವಾಗಬೇಕಿರುವ ಕಾರಣ
ವಿದ್ಯಾರ್ಥಿಗಳು, ಪಾಲಕರ ಮನವಿ ಮೇರೆಗೆ ಪ್ರಥಮ ಪಿಯುಸಿ ತರಗತಿ ದಾಖಲಾತಿಗೆ ದಿನಾಂಕ ವಿಸ್ತರಿಸಲಾಗಿದೆ" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

2022-23ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಪಿಯುಸಿಗೆ ಸಂಬಂಧಿಸಿದಂತೆ ದಾಖಲಾತಿ ದಿನಾಂಕವನ್ನು ಜುಲೈ 11,2022ರ ವರೆಗೆ ದಂಡರಹಿತವಾಗಿ ಉಲ್ಲೇಖ-2ರಲ್ಲಿ ತಿಳಿಸಿರುವಂತೆ ವಿಸ್ತರಿಸಲಾಗಿತ್ತು. ಆದರೆ ಸಿಬಿಎಸ್ಇ ಹಾಗೂ ಐಸಿಎಸ್‌ಸಿ ಬೋರ್ಡ್ ಗಳಲ್ಲಿ ೧೦ನೇ ತರಗತಿ ಫಲಿತಾಂಶ ಪ್ರಕಟಣೆಯು ತಡವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಅನೇಕ ಪೋಷಕರು ಹಾಗೂ ವಿದ್ಯಾರ್ಥಿಗಳು ದಾಖಲಾತಿ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿರುತ್ತಾರೆ. ದಂಡ ಶುಲ್ಕ ರಹಿತವಾಗಿ ಪ್ರಥಮ ಪಿಯುಸಿ ದಾಖಲಾತಿ ದಿನಾಂಕವನ್ನು ಜುಲೈ 12,2022 ರಿಂದ ಜುಲೈ 30,2022ರ ವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಈ ದಾಖಲಾತಿ ವಿಸ್ತರಣೆ ದಿನಾಂಕವು ಪ್ರಥಮ ಪಿಯುಸಿ ದಾಖಲಾತಿಗೆ ಮಾತ್ರ ಅನ್ವಯಿಸುತ್ತದೆ. ವಿಳಂಬ ದಾಖಲಾತಿ ಶುಲ್ಕ 670/-ರೂ ದಂಡ ಶುಲ್ಕದೊಂದಿಗೆ ಪಾವತಿಸಲು ಆಗಸ್ಟ್ 6,2022 ಕೊನೆಯ ದಿನವಾಗಿರುತ್ತದೆ ಮತ್ತು ವಿಶೇಷ ದಂಡ ಶುಲ್ಕ 2,890/-ರೂ ಗಳೊಂದಿಗೆ ಪಾವತಿಸಲು ಆಗಸ್ಟ್ 12,2022 ಕೊನೆಯ ದಿನವಾಗಿರುತ್ತದೆ.

For Quick Alerts
ALLOW NOTIFICATIONS  
For Daily Alerts

English summary
Karnataka education minister announced that first puc admission 2022 dates has been extended.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X