ಜುಲೈ 16 ರಿಂದ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಆರಂಭ

ರಾಜ್ಯಾದ್ಯಂತ ಕೋವಿಡ್ ಸೋಂಕು ಹೆಚ್ಚುತ್ತಿರುವ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿದಿದ್ದು, ಈ ಬಳಿಕ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯ ದಿನಾಂಕವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಿಗದಿ ಮಾಡಿದೆ.

 
ಪ್ರಥಮ ಪಿಯುಸಿ ಪೂರಕ ಪರೀಕ್ಷಾ ದಿನಾಂಕ ನಿಗದಿ

2019-20ನೇ ಸಾಲಿನಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಜುಲೈ 16 ರಿಂದ ಜುಲೈ 27,2020ರ ಒಳಗೆ ಪರೀಕ್ಷೆ ಮುಗಿಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ. ಈ ದಿನಾಂಕದ ಒಳಗೆ ರಾಜ್ಯದ ಎಲ್ಲಾ ಕಾಲೇಜುಗಳು ಪರೀಕ್ಷೆಯನ್ನು ನಡೆಸಬೇಕಿದೆ.

ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದ ಆಯಾ ಕಾಲೇಜುಗಳಲ್ಲಿಯೇ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ಕಾಲೇಜುಗಳು ಅಗತ್ಯ ವೇಳಾಪಟ್ಟಿ ರಚನೆ ಮಾಡಿಕೊಂಡು ಪೂರಕ ಪರೀಕ್ಷೆಯನ್ನು ನಡೆಸಬೇಕಿದೆ.

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಾಗುತ್ತಿದ್ದರೂ, ಆ ನಡುವೆಯೇ ಪರೀಕ್ಷೆಗಳು ನಡೆಯುತ್ತಿವೆ. ಹೀಗಾಗಿ, ಅಗತ್ಯ ಸುರಕ್ಷತ ಕ್ರಮಗಳನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ವಿದ್ಯಾರ್ಥಿಗಳು ಸುರಕ್ಷತೆ ಕಾಪಾಡುವುದು ಕಾಲೇಜಿನ ಜವಾಬ್ದಾರಿಯಾಗಿದೆ. ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿದೆ. ಥರ್ಮಲ್ ಸ್ಕ್ಯಾನಿಂಗ್ ಮಾಡುವುದು, ಸ್ಯಾನಿಟೈಸರ್ ಬಳಸುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಬೆಂಗಳೂರಿನಲ್ಲಿ ಕೊರೊನಾ ವ್ಯಾಪಕವಾಗಿ ಹಬ್ಬುತ್ತಿದ್ದು, ಅಲ್ಲಿನ ಕಾಲೇಜುಗಳು ಇನ್ನಷ್ಟು ಮುಂಜಾಗ್ರತೆಯನ್ನು ವಹಿಸಬೇಕಿದೆ ಮತ್ತು ಪರೀಕ್ಷೆಯು ಜುಲೈ 27,2020ರೊಳಗೆ ಮುಗಿಯಬೇಕು ಎಂದು ಪಿಯುಸಿ ಬೋರ್ಡ್ ತಿಳಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka pre university department announced first puc supplementary exam dates. Exams will held from July 16 to July 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X