ಹಿಂದುಳಿದ ವರ್ಗಗಳ ಪಿಎಚ್.ಡಿ ಅಭ್ಯರ್ಥಿಗಳಿಗೆ ಫೆಲೋಶಿಪ್: ಅರ್ಜಿ ಸಲ್ಲಿಸಲು ಅ.20ರ ವರೆಗೆ ಅವಧಿ ವಿಸ್ತರಣೆ

2019-20 ನೇ ಸಾಲಿನಲ್ಲಿ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ನವೀಕರಣ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆಸಕ್ತರು ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಅಕ್ಟೋಬರ್ 20,2019ರ ವರೆಗೆ ವಿಸ್ತರಿಸಲಾಗಿದೆ.

ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರೆ ಓಬಿಸಿ ಗಳಿಗೆ ಸೇರಿದ ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ನೀಡಲಾಗುವುದು.

ಪಿ.ಎಚ್‌.ಡಿ ಅಭ್ಯರ್ಥಿಗಳಿಗೆ ಫೆಲೋಶಿಪ್: ಅರ್ಜಿ ಸಲ್ಲಿಸಲು ಅ.20 ಕೊನೆಯ ದಿನ

ಇಲಾಖೆಯಿಂದ ಈ ಹಿಂದೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗೆ ಆಯ್ಕೆಯಾಗಿದ್ದು, ಪ್ರಸ್ತುತ ಸಾಲಿನಲ್ಲಿ ಮುಂದುವರೆಯುತ್ತಿರುವ ಅರ್ಹ ನವೀಕರಣ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯವನ್ನು ಪಡೆಯಲು ಅವಕಾಶವಿರುವುದಿಲ್ಲ.

ಮಾನವಿಕ ವಿಷಯಗಳು, ಭಾಷೆ, ಸಮಾಜ ವಿಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳು, ವಾಣಿಜ್ಯ ಮತ್ತು ನಿರ್ವಹಣೆ, ತಾಂತ್ರಿಕ ಹಾಗೂ ವೈದ್ಯಕೀಯ ವಿಜ್ಞಾನಗಳಲ್ಲಿ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ಅನ್ನು ನೀಡಲಾಗುವುದು.

ಅರ್ಹತೆಗಳು :

* ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
* ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
* ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪೂರ್ಣಾವಧಿ (Full Time) ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.
* ಸೌಲಭ್ಯವನ್ನು ಪಡೆಯಲಿಚ್ಛಿಸುವ ವಿದ್ಯಾರ್ಥಿಯು ಭಾರತ ಸರ್ಕಾರ /ಕರ್ನಾಟಕ ಸರ್ಕಾರ/ವಿಶ್ವವಿದ್ಯಾಲಯ ಅಥವಾ ಇತರೆ ಯಾವುದೇ ಸಂಸ್ಥೆಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗೆ ಆಯ್ಕೆಯಾಗಿರಬಾರದು.

ಶೈಕ್ಷಣಿಕ ಅರ್ಹತೆಗಳು :

• ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.
• ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಗಳಲ್ಲಿ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿಎಚ್.ಡಿ ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.

ವಯೋಮಿತಿ :

• ಅಭ್ಯರ್ಥಿಯ ಗರಿಷ್ಠ ವಯೋಮಿತಿ 35 ವರ್ಷಗಳು.

ವಿದ್ಯಾರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ :

ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರಾತಿಗಾಗಿ ನಿಗದಿಪಡಿಸಿರುವ ಆದಾಯಮಿತಿ.

• ಪ್ರವರ್ಗ-1 - ರೂ.4.50 ಲಕ್ಷ.
• ಪ್ರವರ್ಗ-2(ಎ), 3(ಎ), 3(ಬಿ) ಮತ್ತು Other OBC - ರೂ.3.50 ಲಕ್ಷ.

ಕೇಂದ್ರ / ರಾಜ್ಯ ಸರ್ಕಾರಿ / ಅನುದಾನಿತ ಸಂಸ್ಥೆ / ಸಾರ್ವಜನಿಕ ಸ್ವಾಮ್ಯತೆಗೆ ಒಳಪಟ್ಟ ಸಂಸ್ಥೆಗಳ ಉದ್ಯೋಗಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಹರಲ್ಲ.

ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.

ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಪಿಎಚ್.ಡಿ ಅಧ್ಯಯನಕ್ಕಾಗಿ ಈ ಸೌಲಭ್ಯವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.10.2019ರ ಸಂಜೆ 5:00 ಗಂಟೆ.

ಎಲ್ಲಾ ದಾಖಲೆಗಳ ಒಂದು ಸೆಟ್ ದೃಢೀಕೃತ ಪ್ರತಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ 20.10.2019.

ದೂರವಾಣಿ ಸಂಖ್ಯೆ: 8050770004

ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ ಗಮನಿಸಲು ಸೂಚಿಸಲಾಗಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Applications are invited for scholarship / fellowship by students of backward classes who are engaged in full-time Ph.D in 2019-20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+