ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಫೆಲೋಶಿಪ್

Posted By:

2017-18 ನೇ ಸಾಲಿನಲ್ಲಿ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ/ಫೆಲೋಶಿಪ್ ಮತ್ತು ಶುಲ್ಕ ವಿನಾಯಿತಿ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರ ನೇಮಕಾತಿ

ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರೆ ಒಬಿಸಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.5000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಹಾಗೂ ನಿಗದಿತ ಶುಲ್ಕ ವಿನಾಯಿತಿ ನೀಡಲಾಗುವುದು.

ಪಿಎಚ್.ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್

ಇಲಾಖೆಯಿಂದ ಈ ಹಿಂದೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗೆ ಆಯ್ಕೆಯಾಗಿದ್ದು, ಪ್ರಸ್ತುತ ಸಾಲಿನಲ್ಲಿ ಮುಂದುವರೆಯುತ್ತಿರುವ ಅರ್ಹ ನವೀಕರಣ ವಿದ್ಯಾರ್ಥಿಗಳು ಹಾಗೂ ಹೊಸ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯವನ್ನು ಪಡೆಯಲು ಅವಕಾಶವಿರುವುದಿಲ್ಲ.

ಮಾನವಿಕ ವಿಷಯಗಳು, ಭಾಷೆ, ಸಮಾಜ ವಿಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳು, ವಾಣಿಜ್ಯ ಮತ್ತು ನಿರ್ವಹಣೆ, ತಾಂತ್ರಿಕ ಹಾಗೂ ವೈದ್ಯಕೀಯ ವಿಜ್ಞಾನಗಳಲ್ಲಿ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮಾಸಿಕ ರೂ.5,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ಅನ್ನು ನೀಡಲಾಗುವುದು ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುವುದು.

ಅರ್ಹತೆಗಳು

  • ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
  • ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪೂರ್ಣಾವಧಿ (Full Time) ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರಬೇಕು.
  • ಸೌಲಭ್ಯವನ್ನು ಪಡೆಯಲಿಚ್ಛಿಸುವ ವಿದ್ಯಾರ್ಥಿಯು ಭಾರತ ಸರ್ಕಾರ /ಕರ್ನಾಟಕ ಸರ್ಕಾರ/ವಿಶ್ವವಿದ್ಯಾಲಯ ಅಥವಾ ಇತರೆ ಯಾವುದೇ ಸಂಸ್ಥೆಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗೆ ಆಯ್ಕೆಯಾಗಿರಬಾರದು.

ಶೈಕ್ಷಣಿಕ ಅರ್ಹತೆಗಳು

• ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.
• ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿಎಚ್.ಡಿ ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.

ವಯೋಮಿತಿ

• ಅಭ್ಯರ್ಥಿಯ ಗರಿಷ್ಠ ವಯೋಮಿತಿ 35 ವರ್ಷಗಳು.

ವಿದ್ಯಾರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯಮಿತಿ

ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರಾತಿಗಾಗಿ ನಿಗದಿಪಡಿಸಿರುವ ಆದಾಯಮಿತಿ.
• ಪ್ರವರ್ಗ-1 - ರೂ.4.50 ಲಕ್ಷ.
• ಪ್ರವರ್ಗ-2(ಎ), 3(ಎ), 3(ಬಿ) ಮತ್ತು Other OBC - ರೂ.3.50 ಲಕ್ಷ.

ಶುಲ್ಕವಿನಾಯಿತಿ ಮಂಜೂರಾತಿಗಾಗಿ ನಿಗದಿಪಡಿಸಿರುವ ಆದಾಯಮಿತಿ.
• ಪ್ರವರ್ಗ-1 - ರೂ.2.50 ಲಕ್ಷ.
• ಪ್ರವರ್ಗ-2(ಎ), 3(ಎ), 3(ಬಿ) ಮತ್ತು Other OBC - ರೂ.1.00 ಲಕ್ಷ.

ವಿದ್ಯಾರ್ಥಿಯು ಭಾರತ ಸರ್ಕಾರ /ಕರ್ನಾಟಕ ಸರ್ಕಾರ /ವಿಶ್ವವಿದ್ಯಾಲಯ ಅಥವಾ ಇತರೆ ಯಾವುದೇ ಸಂಸ್ಥೆಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಪಡೆಯುತ್ತಿದ್ದು, ನಿಗದಿತ ಆದಾಯ ಮಿತಿ ಹೊಂದಿದ್ದಲ್ಲಿ ಶುಲ್ಕ ವಿನಾಯಿತಿ ನೀಡಲಾಗುವುದು.

ಕೇಂದ್ರ / ರಾಜ್ಯ ಸರ್ಕಾರಿ / ಅನುದಾನಿತ ಸಂಸ್ಥೆ / ಸಾರ್ವಜನಿಕ ಸ್ವಾಮ್ಯತೆಗೆ ಒಳಪಟ್ಟ ಸಂಸ್ಥೆಗಳ ಉದ್ಯೋಗಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಹರಲ್ಲ.

ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು. ಆದರೆ ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.

ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಪಿಎಚ್.ಡಿ ಅಧ್ಯಯನಕ್ಕಾಗಿ ಈ ಸೌಲಭ್ಯವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-12-2017

ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ ಗಮನಿಸಲು ಸೂಚಿಸಲಾಗಿದೆ.

English summary
Applications are invited for scholarship / fellowship by students of backward classes who are engaged in full-time Ph.D in 2017-18.
Please Wait while comments are loading...