ನಿಯಮಿತ ಅವಧಿಯಲ್ಲಿ ಆನ್‌ಲೈನ್ ಶಿಕ್ಷಣಕ್ಕೆ ಸರ್ಕಾರ ಆದೇಶ

ಕರ್ನಾಟಕದಲ್ಲಿನ ಐಸಿಎಸ್‌ಇ, ಸಿಬಿಎಸ್‌ಇ, ಅಂತಾರಾಷ್ಟ್ರೀಯ ಪಠ್ಯಕ್ರಮ ಹಾಗೂ ರಾಜ್ಯ ಪಠ್ಯಕ್ರಮ ಸೇರಿದಂತೆ ಎಲ್ಲಾ ಶಾಲೆಗಳಲ್ಲಿಯೂ ಆನ್‌ಲೈನ್ ಶಿಕ್ಷಣ ನೀಡಬಹುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆನ್‌ಲೈನ್ ಶಿಕ್ಷಣಕ್ಕೆ ಒಪ್ಪಿಗೆ ನೀಡಿದ ಸರ್ಕಾರ

''ಆನ್‌ಲೈನ್‌ ಶಿಕ್ಷಣದ ಮಾದರಿ ಸಿದ್ಧಪಡಿಸಲು ರಚಿಸಿದ ತಜ್ಞರ ಸಮಿತಿ ನೀಡುವ ವರದಿ ಆಧರಿಸಿ ರಾಜ್ಯ ಸರಕಾರ ಹೊರಡಿಸುವ ಅಂತಿಮ ಮಾರ್ಗಸೂಚಿಗಳು ಬರುವವರೆಗೆ ಮಾತ್ರ ಈ ಆದೇಶ ಜಾರಿಯಲ್ಲಿರುತ್ತದೆ'', ಎಂದು ಶಿಕ್ಷಣ ಇಲಾಖೆಯ (ಪ್ರಾಥಮಿಕ) ಅಧೀನ ಕಾರ್ಯದರ್ಶಿ ಶೇಖರ್‌ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಕೇಂದ್ರ ಮಾರ್ಗಸೂಚಿ ಸೂತ್ರಗಳ ಪ್ರಕಾರ, ಪೂರ್ವ ಪ್ರಾಥಮಿಕ ಬೋಧಿಸುವ ಶಿಕ್ಷಣ ಸಂಸ್ಥೆಗಳು ವಾರಕ್ಕೆ ಒಂದು ದಿನ ಗರಿಷ್ಟ ೩೦ ನಿಮಿಷ ಪೋಷಕರ ಜೊತೆ ಆನ್‌ಲೈನ್ ಸಂವಹನ ಮತ್ತು ಮಾರ್ಗದರ್ಶನ ನೀಡಬಹುದು. 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಮೂರು ದಿನ (ದಿನ ಬಿಟ್ಟು ದಿನ) ಎರಡು ಅವಧಿ 30 ರಿಂದ 45 ನಿಮಿಷ ಹಾಗೂ 6 ರಿಂದ 8ನೇ ತರಗತಿ ಮಕ್ಕಳಿಗೆ ವಾರದಲ್ಲಿ 5 ದಿನ ಗರಿಷ್ಟ ಎರಡು ಅವಧಿ 30 ರಿಂದ 45 ನಿಮಿಷ ಹಾಗೂ 9 ಮತ್ತು 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಐದು ದಿನ 30 ರಿಂದ 45 ನಿಮಿಷ ಗರಿಷ್ಟ ನಾಲ್ಕು ಅವಧಿ ಆನ್‌ಲೈನ್ ಶಿಕ್ಷಣ ನೀಡಬಹುದು.

ಕೊರೋನಾ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಯಮಿತ ಶಿಕ್ಷಣಕ್ಕೆ ಪೂರಕವಾಗಿ ಆನ್‌ಲೈನ್ ತರಗತಿಗಳನ್ನು ನಡೆಸಬೇಕಾಗಿದೆ. ಶಿಕ್ಷಣ ಸಂಸ್ಥೆಗಳು ಯಾವುದೇ ಹೆಚ್ಚುವರಿ ಶುಲ್ಕ ವಿಧಿಸಬಾರದು ಮತ್ತು ಈ ಶುಲ್ಕವನ್ನು ವಾರ್ಷಿಕ ಬೋಧನಾ ಶುಲ್ಕದಿಂದಲೇ ಭರಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ

More News  

For Quick Alerts
ALLOW NOTIFICATIONS  
For Daily Alerts

English summary
Karnataka state government orders to give online education for students.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+