Karnataka Govt Promoted PE Teachers : ದೈಹಿಕ ಶಿಕ್ಷಣ ಶಿಕ್ಷಕರನ್ನು ಪರಿವೀಕ್ಷಕರ ಹುದ್ದೆಗೆ ಬಡ್ತಿ

ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಸರ್ಕಾರ ಆದೇಶ ಹೊರಡಿಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

 

ದೈಹಿಕ ಶಿಕ್ಷಣ ಶಿಕ್ಷಕರ ಬಡ್ತಿ : ಕರ್ನಾಟಕ ಸರ್ಕಾರ ಅಸ್ತು

ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಯಿಂದ ಗ್ರೂಪ್-ಬಿ ವೃಂದದ 148 ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗಳಿಗೆ ಮುಂಬಡ್ತಿಯನ್ನು ನೀಡುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಸಚಿವರು ಮಾತನಾಡಿದ್ದಾರೆ.

2016ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪದೋನ್ನತಿ ಪ್ರಕ್ರಿಯೆ ನಡೆದಿತ್ತು, ಇದೀಗ ಐದು ವರ್ಷಗಳ ಬಳಿಕ ಬಡ್ತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಆಡಳಿತಾತ್ಮಕ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದಿದ್ದಾರೆ.

ಜೂನ್ 21ರಂದು ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತಿದ್ದು, ಕೋವಿಡ್ ನಿಯಮಗಳನ್ನು ಅನುಸರಿಸಿ ದೈಹಿಕ ಶಿಕ್ಷಕರು ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿ ಮತ್ತು ತಮ್ಮ ಆಸಕ್ತಿಯ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Karnataka minister s suresh kumar stated that government promoted grade 1 Physical education teachers to group B physical education supervisors.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X