11 First Grade Evening Colleges In Karnataka : ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದಲ್ಲಿ 11 ಸಂಜೆ ಕಾಲೇಜು ಆರಂಭ

ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳನ್ನು ಆರಂಭಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಕಾಲೇಜುಗಳನ್ನು ತೆರೆಯಲು ಮುಂದಾಗಿದ್ದು, ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

 
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದಲ್ಲಿ 11 ಪ್ರಥಮ ದರ್ಜೆ  ಸಂಜೆ ಕಾಲೇಜು ಆರಂಭ

ಈ ವರ್ಷಪೂರ್ತಿ ಕೊರೋನಾ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿತ್ತು. ವಿದ್ಯಾರ್ಥಿಗಳಿಗೆ ಕೇವಲ ಆನ್‌ಲೈನ್ ಮೂಲಕ ಕಲಿಕೆಗೆ ಅವಕಾಶ ನೀಡಲಾಗಿತ್ತು. ಅದಲ್ಲದೇ ಕೊರೋನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ವಿದ್ಯಾರ್ಥಿಗಳ ಫಲಿತಾಂಶವನ್ನು ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ಪ್ರಕಟಿಸಲಾಗಿದೆ. ಹೀಗಾಗಿ ಬಹುತೇಕ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪದವಿ ಕೋರ್ಸ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನಿಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.

2021-22ನೇ ಸಾಲಿನಲ್ಲಿ ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜುಗಳ ಪ್ರಾರಂಭ ಮಾಡಲಾಗುತ್ತಿದೆ. ಕಾಲೇಜುಗಳಲ್ಲಿ ಲಭ್ಯವಿರುವ ಮೂಲ ಸೌಕರ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಹಾಗೂ ಉತ್ತಮ ಉದ್ಯೋಗಾವಕಾಶಗಳಿರುವ ಹಾಗೂ ಅತೀ ಹೆಚ್ಚು ಬೇಡಿಕೆ ಇರುವ ಬಿ.ಕಾಂ ಮತ್ತು ಬಿಸಿಎ ಕೋರ್ಸ್​ಗಳಿಗಷ್ಟೇ ಹೆಚ್ಚುವರಿ ಸಂಜೆ ಕಾಲೇಜುಗಳ ಪ್ರಾರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ.

ಸರ್ಕಾರದ ಅನುಮತಿ ಮೇರೆಗೆ ರಾಜ್ಯದಲ್ಲಿ ಒಟ್ಟು 11 ನಗರ ಪಾಲಿಕೆಗಳಲ್ಲಿ ತಲಾ ಒಂದು ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು ಆರಂಭವಾಗಲಿದ್ದು, ಹೊಸದಾಗಿ ಆರಂಭವಾಗುತ್ತಿರುವ ಸಂಜೆ ಕಾಲೇಜುಗಳ ಪಟ್ಟಿ ಇಲ್ಲಿದೆ :

1. ಸರ್ಕಾರಿ ಆರ್.ಸಿ ಕಾಲೇಜು, ಬೆಂಗಳೂರು

2. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಬೆಳಗಾವಿ

3. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಿ.ಹೆಚ್.ರಸ್ತೆ ತುಮಕೂರು

 

4. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುವೆಂಪು ನಗರ ಮೈಸೂರು

5. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿವಮೊಗ್ಗ

6. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂ.ಸಿಸಿ ಬ್ಲಾಕ್ ದಾವಣಗೆರೆ

7. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ, ಮಂಗಳೂರು

8. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಮಾರೇಶ್ವರನಗರ, ಧಾರವಾಡ

9. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನವಬಾಗ್ ಖಾಜಾ ಕಾಲೋನಿ, ಬಿಜಾಪುರ

10. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೇಡಂ ರಸ್ತೆ, ಗುಲ್ಬರ್ಗಾ

11. ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿ

For Quick Alerts
ALLOW NOTIFICATIONS  
For Daily Alerts

English summary
To manage the sudden surge in the demand for undergraduate courses following the promotion of all 2nd PU students this year, the higher education department is opening 11 evening colleges from this academic year.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X