ರಾಜ್ಯದಲ್ಲಿ ಶಾಲೆಗಳಿಗೆ ಅಕ್ಟೋಬರ್ 12 ರಿಂದ ಅಕ್ಟೋಬರ್ 30,2020ರ ವರೆಗೆ ಮಧ್ಯಂತರ ರಜೆಯನ್ನು ಘೋಷಿಸಲು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯುಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಕೋವಿಡ್ -19 ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.
ಹಲವಾರು ಶಿಕ್ಷಕರು ಸಹ ಕೋವಿಡ-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ಅಕ್ಟೋಬರ್ 12,2020 ರಿಂದ ಮೂರು ವಾರಗಳ ಕಾಲ ಅಂದರೆ ಅಕ್ಟೋಬರ್ 30,2020ರ ವರೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ ಎಂದು ತಿಳಿಸಿದ್ದಾರೆ.
ಹಾಗೂ ಪ್ರಕಟಣೆಯಲ್ಲಿ ಅವರು "ನನ್ನ ಪ್ರೀತಿಯ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕ ವರ್ಗದವರೆಲ್ಲರಿಗೂ ಮುಂಚಿತವಾಗಿ ದಸರಾ ಹಬ್ಬದ ಶುಭಾಶಯಗಳು" ಎಂದು ಎಲ್ಲಾ ಶಾಲಾ ವಿದ್ಯಾರ್ಥಿ ಮತ್ತು ಶಿಕ್ಷಕ ವರ್ಗದವರಿಗೆ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.


Click it and Unblock the Notifications











