
ಡಿಸೆಂಬರ್ 1 ರಿಂದ ರಾಜೀವ್ ಗಾಂಧಿ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳನ್ನು ಪ್ರಾರಂಭಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಡಿಸೆಂಬರ್ ೧ರಿಂದ ಕಾಲೇಜುಗಳು ಪುನರಾರಂಭಗೊಳ್ಳಲಿವೆ ಎಂದಿದ್ದಾರೆ.
ಈಗಾಗಲೇ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
For Quick Alerts
For Daily Alerts


Click it and Unblock the Notifications